

ಉಡುಪಿ: ಸ್ವಾತಂತ್ರ$್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಅವರ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಬುಧವಾರ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸತಿ ಇಲಾಖೆ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತ್ತೂರು ಉತ್ಸವ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದ್ದು, ರಥವು ರಾಜ್ಯಾದ್ಯಂತ ಸಂಚರಿಸುವ ಮೂಲಕ ರಾಣಿ ಚೆನ್ನಮ್ಮರ ಸಂದೇಶ, ಸಾಹಸಗಾಥೆ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಮಾತನಾಡಿ, ರಾಣಿ ಚೆನ್ನಮ್ಮರ ದಿಟ್ಟತನ ಹಾಗೂ ಸ್ವಾಭಿಮಾನದ ಪ್ರತಿಕವಾದ ಜೀವನಶೈಲಿಯನ್ನು ಮಹಿಳೆಯರು ಸ್ಪೂರ್ತಿಯಾಗಿರಿಸಿಕೊಂಡು, ಆಧುನಿಕ ಸಮಾಜದಲ್ಲಿ ಪ್ರತಿನಿತ್ಯ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಉಪನ್ಯಾಸ ನೀಡಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಕ.ಸಾ.ಪ. ಸದಸ್ಯ ಮನೋಹರ್ ಹಾಗೂ ನರಸಿಂಹಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಪ್ರಭಾಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ಯಾಮಿ ಚಿಕ್ಕಮಠ ವಂದಿಸಿದರು.