ಉಡುಪಿ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾವಳಿ

kusti pandyata
kusti pandyata
Published on

ಕುಂದಾಪುರ: ಉಡುಪಿ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾವಳಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆಯಿತು.

ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಪಂದ್ಯಾಟ ಉದ್ಘಾಟಿಸಿದರು.

ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ., ಉಡುಪಿ ಜಿಲ್ಲಾ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಕುಸುಮಾಕರ ಶೆಟ್ಟಿ, ಉಡುಪಿ ಜಿಲ್ಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಕಿಶನ್‌ರಾಜ್ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ವಿಜಯಕುಮಾರ ಶೆಟ್ಟಿ, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷ ಉದಯ ಮಡಿವಾಳ, ಸಂತೋಷ್ ಕುಮಾರ್ ಶೆಟ್ಟಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ್ ಗಾಣಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ, ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಪ್ರೌಢ ಶಾಲಾ ವಿಭಾಗದ ಮುಖ್ಯಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net