

ಕಾರ್ಕಳ: ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಹಾಗೂ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂ ಆಯೋಜಿಸಿದ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಾರುತಿ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಭೌತಶಾಸ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಗಣಪತಿ ಅವಭೃತ ಹಾಗೂ ನಿಟ್ಟೆ ಎನ್‌ಎಸ್‌ಎಎಂ ಪ.ಪೂ. ಕಾಲೇಜಿನ ಪ್ರಾಂಶುಪಾಲ ಹಾಗೂ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ.ಪ್ರಕಾಶ್ ಶೆಣೈ ಅವರನ್ನು ಸನ್ಮಾನಿಸಲಾಯಿತು.
ಉಜಿರೆ ಎಸ್‌ಡಿಎಂ ಕಾಲೇಜು ಭೌತಶಾಸ್ತ್ರ್ರದ ಸ್ನಾತಕೋತ್ತರ ಹಾಗೂ ಸಂಶೋಧನಾ ವಿಭಾಗ ಮುಖ್ಯಸ್ಥ ಡಾ.ರಾವೇಂದ್ರ ಎಸ್., ಪ್ರಾಂಶುಪಾಲರ ಸಂದ ಅಧ್ಯಕ್ಷ ದಿನೇಶ್ ಎಂ.ಕೊಡವೂರು ಉಪಸ್ಥಿತರಿದ್ದರು. ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ಕಾರ್ಯದರ್ಶಿ ಉವಾಪತಿ ಸ್ವಾಗತಿಸಿದರು. ಖಜಾಂಚಿ ಸದಾನಂದ ಕುಲಾಲ್ ವಂದಿಸಿದರು. ಮಣಿಪಾಲ ಜ್ಞಾನಸುಧಾ ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ನಿರೂಪಿಸಿದರು.