

ಕಾರ್ಕಳ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕುಂದಾಪುರ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವ್, ಸುಧನ್ವಯು ಮುಂಡ್ಕೂರ್, ಅಚಿಂತ್ಯ ಕೃಷ್ಣ, ಚಿರಾಗ್ರಾವ್, ಎಸ್.ಅನಿರುಧ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವೈಷ್ಣವ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕರನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.