

ಉಡುಪಿ: ಯುವತಿಗೆ ಚೂರಿಯಿಂದ ಇರಿದ ಯುವಕ ಬಳಿಕ ತನಗೇ ಇರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂತೆಕಟ್ಟೆ, ಕಲ್ಯಾಣಪುರ ರೋಬೋಸಾಫ್ಟ್ ರಾಷ್ಟ್ರೀಯ ಹೆದ್ದಾರಿ ಬಳಿ ಸೋಮವಾರ ಸಾಯಂಕಾಲ ನಡೆದಿದೆ.
ಇಬ್ಬರೂ ರಸ್ತೆ ಬದಿ ಹೊರಳಾಡುತ್ತಿದ್ದು, ಗಂಭೀರ ಸ್ಥಿತಿಯಲ್ಲಿರುವ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಗೆ ಮುನ್ನ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿರುವ ಸಾಧ್ಯತೆ ಇದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಆಗಮಿಸಿ, ಪರಿಶೀಲಿಸುತ್ತಿದ್ದಾರೆ.