

ವಿಜಯವಾಣಿ ಸುದ್ದಿಜಾಲ ಉಡುಪಿ
ಕರಾವಳಿ ಜಿಲ್ಲೆಗಳ ನಡೆಯುವ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ಆಯೋಜಿಸುವಂತಾಗಲು ಇತ್ತೀಚೆಗೆ ಅಳವಡಿಸುತ್ತಿರುವ ಕಾನೂನು ನಿಯಮ ಸರಳೀಕರಣಗೊಳಿಸಿ ಅವಕಾಶ ನೀಡುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದರು.
ಇತ್ತೀಚೆಗಿನ ದಿನಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಈ ಎಲ್ಲ ಆಚರಣೆ ನಡೆಸಲು ಕಠಿಣ ನಿಯಮ ಜಾರಿಗೊಳಿಸಿ, ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸುತ್ತಿದೆ. ಶೋಭಾ ಯಾತ್ರೆ, ಧ್ವನಿ ವರ್ಧಕ ಬಳಕೆಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದು ನಮ್ಮ ಸಾಂಪ್ರದಾಯಿಕ ಪದ್ಧತಿ ಅನುಸರಿಸಲು ಹಾಗೂ ಕಾರ್ಯಕ್ರಮ ಆಯೋಜಿಸಲು ಅನಾನುಕೂಲ ಆಗುತ್ತಿದೆ. ಕರಾವಳಿ ಜಿಲ್ಲೆಯ ಸಾರ್ವಜನಿಕ ಹಬ್ಬ ಹಾಗೂ ಧಾರ್ಮಿಕ ಆಚರಣೆಗಳಿಗೆ ಅನಗತ್ಯ ಕಾನೂನು ನಿಯಮ ಅಳವಡಿಸದೆ ಸರಳೀಕರಣಗೊಳಿಸಿ ತ್ವರಿತವಾಗಿ ಅನುಮತಿ ನೀಡಬೇಕು ಎಂದು ಕರಾವಳಿ ಭಾಗದ ಜನತೆಯ ಪರವಾಗಿ ತಮಗೆ ಮನವಿ ಸಲ್ಲಿಸುತ್ತಿರುವುದಾಗಿ ಯಶ್ಪಾಲ್ ಸುವರ್ಣ ತಿಳಿಸಿದರು.