ಅಸಮತೋಲನೆ ನಿವಾರಣೆಗೆ ಉಡುಪಿ ಮಾದರಿ

samvada
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಉಡುಪಿ ಜಿಲ್ಲಾ ಮಟ್ಟದ ಸಭೆಯಲ್ಲಿ ಪ್ರೊ.ಎಂ.ಗೋವಿಂದರಾವ್ ಮಾತನಾಡಿದರು.
Published on

ವಿಜಯವಾಣಿ ಸುದ್ದಿಜಾಲ ಉಡುಪಿ

ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಸ್ಥಳೀಯ ಜನರ ಭಾಗೀದಾರಿಕೆ ಅಗತ್ಯವಾಗಿದ್ದು, ಉಡುಪಿ ಜಿಲ್ಲೆ ಮಾದರಿಯಾಗಿದೆ. ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಅಕ್ಟೋಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಹಾಗೂ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ವಾತನಾಡಿದರು.

ನಂಜುಂಡಪ್ಪ ಸಮಿತಿ ವರದಿಯಲ್ಲಿ 114 ಹಿಂದುಳಿದ ತಾಲೂಕುಗಳನ್ನು ಗುರುತಿಸಲಾಗಿದ್ದು, 31 ಸಾವಿರ ಕೋಟಿ ರೂ. ಅನುದಾನ ಒದಗಿಸುವಂತೆ ಸೂಚಿಲಾಗಿತ್ತು. ಸರ್ಕಾರ ಈ ತಾಲೂಕುಗಳಿಗೆ ಈವರೆಗೆ 35,180 ಕೋಟಿ ರೂ. ಬಿಡುಗಡೆ ಮಾಡಿದ್ದು, 32,610 ಕೋಟಿ ರೂ. ಖರ್ಚಾಗಿದೆ. ಆದರೂ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಸಾಧ್ಯವಾಗಿಲ್ಲ. ಈ ಬಗ್ಗೆ ಅಧ್ಯಯನ ನಡೆಸಿ ಸಮಗ್ರ ವರದಿ ಸಲ್ಲಿಸಲಾಗುವುದು ಎಂದರು.

4 ಜಿಲ್ಲೆಗಳಲ್ಲಿ ತಲಾ ಆದಾಯ ಹೆಚ್ಚು: ರಾಜ್ಯದ ಆದಾಯದಲ್ಲಿ ಶೇ.40ರಷ್ಟು ಪಾಲು ಬೆಂಗಳೂರು ನಗರ ಜಿಲ್ಲೆಯಿಂದ ಲಭ್ಯವಾಗುತ್ತಿದ್ದು, ಉಳಿದಂತೆ ದ.ಕ., ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಆದಾಯ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯ ಮತ್ತಷ್ಟು ಸಮಗ್ರ ಅಭಿವೃದ್ಧಿಗೆ ಬೇಕಾಗಿರುವ ಅಗತ್ಯಗಳ ಬಗ್ಗೆ ಶಿಫಾರಸು ಮಾಡಲಾಗುವುದು. ಕಲಬುರಗಿ ವಿಭಾಗ ವ್ಯಾಪ್ತಿಯ 4 ಜಿಲ್ಲೆಗಳು ಅತ್ಯಂತ ಹಿಂದುಳಿದಿವೆ.

ಸಿಆರ್‌ಜಡ್ ಸಮಸ್ಯೆ ಬಗೆಹರಿಸಿ: ಶಾಸಕ ಕಿರಣ್ ಕುವಾರ್ ಕೊಡ್ಗಿ ವಾತನಾಡಿ, ಸಿಆರ್‌ಜಡ್ ವ್ಯಾಪ್ತಿಯಲ್ಲಿ 500ರಿಂದ 200 ಮೀ. ವ್ಯಾಪ್ತಿಯಲ್ಲಿ ನಿರ್ಬಂಧವಿರುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ತೊಡಕಾಗುತ್ತಿದೆ. ವೈಲ್ಡ್ ಲೈಫ್ ಆ್ಯಕ್ಟ್ ಅನ್ವಯ ಒಂದು ಕಿ.ಮೀ. ಇಕೋ ಸೆನ್ಸಿಟಿವ್ ಜೋನ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ಕೈಗೊಳ್ಳುವಂತಿಲ್ಲ. ಕೇವಲ ಮನೆ ಕಟ್ಟಿಕೊಂಡು ಜೀವನ ನಡೆಸಲು ಅವಕಾಶವಿದೆ. ಭೂಪರಿವರ್ತನೆ ವಾಡಲು ಸಾಧ್ಯವಿಲ್ಲ. ಪಂಚಾಯಿತಿಗಿದ್ದ ಭೂಪರಿವರ್ತನೆ ಅಧಿಕಾರವನ್ನು ತೆಗೆದು ಹಾಕಲಾಗಿದೆ. ಪ್ರಾಧಿಕಾರವೇ ಇದಕ್ಕೆ ಅನುಮತಿ ನೀಡಬೇಕು. ಇದರಿಂದ ಭೂಪರಿವರ್ತನೆ ಕಾರ್ಯ ವಿಳಂಬವಾಗುತ್ತಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಯೋಜನಾ ಇಲಾಖೆ ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯ ಕಾರ್ಯದರ್ಶಿ ಡಾ.ವಿಶಾಲ್ ಆರ್., ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುವಾರಿ ವಾತನಾಡಿದರು. ಜಿಪಂ ಸಿಇಒ ಪ್ರತೀಕ್ ಬಾಯಲ್, ಎಸ್‌ಪಿ ಡಾ.ಅರುಣ್ ಕೆ. ಮತ್ತಿತರರು ಉಪಸ್ಥಿತರಿದ್ದರು.

ಅಭಿವೃದ್ಧಿಯಲ್ಲಿ ಸರ್ಕಾರದ ಪಾತ್ರವಿಲ್ಲ

ಉಡುಪಿ ಮತ್ತು ದ.ಕ. ಜಿಲ್ಲೆ ಜನರು ಸ್ವಪರಿಶ್ರಮದಿಂದ ಜಿಲ್ಲೆಯ ವಿಕಾಸಕ್ಕೆ ಭದ್ರಬುನಾದಿ ಹಾಕಿದ್ದಾರೆ. ಮುಖ್ಯವಾಗಿ ಮಹಿಳೆಯರು ವಿದ್ಯಾಭ್ಯಾಸ ಪಡೆದು ಬ್ಯಾಂಕ್ ಉದ್ಯೋಗದತ್ತ ಒಲವು ತೋರಿಸಿದ್ದರಿಂದ ಹುಡುಗರು ಹೆಚ್ಚು ಕಲಿಯಬೇಕಾಯಿತು. ಇವೆಲ್ಲವೂ ಪ್ರಗತಿಗೆ ಪೂರಕವಾಯಿತು.

ಪ್ರೊ.ಎಂ.ಗೋವಿಂದರಾವ್, ಅಧ್ಯಕ್ಷರು, ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ

ಉಡುಪಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕೈಗಾರಿಕಾ ಪ್ರದೇಶಗಳ ವಿಸ್ತರಣೆಯಾಗಬೇಕು. ದೊಡ್ಡ ಪ್ರವಾಣದ ಕೈಗಾರಿಕೆಗಳು ಬಂದಲ್ಲಿ ಸಣ್ಣ ಸಣ್ಣ ಕೈಗಾರಿಕೆಗಳೂ ಹುಟ್ಟಿಕೊಳ್ಳುತ್ತವೆ. 9 ಮತ್ತು 11 ದಾಖಲಾತಿಗಳನ್ನು ಪಡೆಯುವ ಕಾರ್ಯ ತುಂಬಾ ವಿಳಂಬವಾಗುತ್ತಿದೆ. ಕೈಗಾರಿಕೆಗಳಿಗೆ ಎರಡು ಎಕರೆಗಿಂತ ಕಡಿಮೆ ಜಾಗಕ್ಕೆ ಭೂಪರಿವರ್ತನೆಗೆ ವಿನಾಯಿತಿ ನೀಡಬೇಕು. ಮಂಗಳೂರಿನಿಂದ ಮುಂಬೈಗೆ ರೈಲಿನಲ್ಲಿ ಈ ಹಿಂದೆ 16 ಟನ್‌ಗಳಷ್ಟು ಸರಕುಗಳ ಸಾಕಾಣಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಈ ಪ್ರವಾಣ ಅರ್ಧಕ್ಕೆ ಇಳಿಕೆಯಾಗಿದ್ದು ಜಿಲ್ಲಾಡಳಿತ ಗಮನಹರಿಸಬೇಕು. ಹರೀಶ್ ಕುಂದರ್, ಅಧ್ಯಕ್ಷರು, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ https://www.vijayavani.net/tipper-seized-for-illegal-sand-transportation https://www.vijayavani.net/submit-airport-proposal-to-byndoor-centre

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net