ಉಡುಪಿ ಕೊಲೆ ಪ್ರಕರಣ; ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

Udupi Accused
Published on

ಬೆಳಗಾವಿ: ನವೆಂಬರ್ 12ರಂದು ಉಡುಪಿಯ ನೇಜಾರಿನಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್​ ಅರುಣ್​ ಚೌಗಲೆ ಎಂದು ಗುರುತಿಸಲಾಗಿದ್ದು, ಈತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

Udupi Murder

ಉಡುಪಿಯ ನೇಜಾರಿನಲ್ಲಿ ಹಸೀನಾ (48), ಅಫ್ನಾನ್​ (23), ಅಯ್ನಾಜ್ (20), ಅಸೀಮ್ (20) ಅವರನ್ನು ಚೂರಿಯಿಂದ ಭೀಕರವಾಗಿ ಇರಿದು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಬಳಿಕ ಬೆಳಗಾವಿಯ ಕುಡಚಿಯಲ್ಲಿರುವ ಸಂಬಂಧಿಕರೊಬ್ಬರ ಮನೆಯಲ್ಲಿ ಅವಿತು ಕುಳಿತಿದ್ದ. ಮೊಬೈಲ್​ ಲೊಕೇಷನ್​ ಆಧರಿಸಿ ಆರೋಪಿಯ ಜಾಡು ಹಿಡಿಯುವಲ್ಲಿ ಯಶಸ್ವಿಯಾದ ಉಡುಪಿ ಪೊಲೀಸರು ಹಂತಕನನ್ನು ಬಂಧಿಸಿದ್ದಾರೆ.

ಯಾವ ಕಾರಣಕ್ಕೆ ಕೊಲೆ ಮಾಡಲಾಗಿತ್ತು ಎಂಬ ಕಾರಣ ಈವರೆಗೂ ತಿಳಿದು ಬಂದಿಲ್ಲ. ಹಂತಕನನ್ನು ಉಡುಪಿಗೆ ಕರೆತರುತ್ತಿರುವ ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸುವ ಸಾಧ್ಯತೆ ಇದೇ ಎಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net