

ಉಡುಪಿ: ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನಗಳು, ರಿಾ, ಟ್ಯಾಕ್ಸಿ ಚಾಲಕರ ವಿರುದ್ಧ ಗುರುವಾರ ಬೆಳಗ್ಗೆ ಕಾರ್ಯಾಚರಣೆಗೆ ಇಳಿದ ಪೊಲೀಸರು 282 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ, 1,58 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿ 82 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ 36,300 ರೂ., ಕಾರ್ಕಳ ಉಪವಿಭಾಗ ವ್ಯಾಪ್ತಿಯಲ್ಲಿ 71 ವಾಹನಗಳ ವಿರುದ್ಧ 42,000 ರೂ., ಉಡುಪಿ ವಿಭಾಗ ವ್ಯಾಪ್ತಿಯಲ್ಲಿ 129 ವಾಹನಗಳ ವಿರುದ್ದ 80,500 ರೂ. ದಂಡ ವಿಧಿಸಲಾಗಿದೆ.
ವಿಶೇಷ ತಪಸಣಾ ಕಾರ್ಯಚರಣೆಯಲ್ಲಿ ಸುಮಾರು 930 ವಾಹನಗಳನ್ನು ತಪಾಸಣೆ ನಡೆಲಾಗಿದೆ. ಪಾನಮತ್ತ ಚಾಲನೆ ಬಗ್ಗೆ ಓರ್ವ ಪೋಷಕರಿಗೂ ದಂಡ ವಿಧಿಸಲಾಗಿದೆ. ಸೂಕ್ತ ದಾಖಲೆಗಳನ್ನು ಹೊಂದದೇ ಇರುವ ಬಗ್ಗೆ 39, ಓವರ್ ಲೋಡ್ ಹೊಂದಿರುವ ಬಗ್ಗೆ 48 ಹಾಗೂ 194 ಇತರ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 5 ಮಂದಿ ಪೊಲೀಸ್ ನಿರೀಕ್ಷಕರು, 30 ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಇತ್ತೀಚಿನ ದಿನಗಳಲ್ಲಿ ಶಾಲಾ ವಾಹನಗಳು ಅಜಾಗರೂಕತೆ ಹಾಗೂ ರ್ನಿಲಕ್ಷತನದಿಂದ ಚಲಾಯಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ತಪಾಸಣೆ ಕೈಗೊಳ್ಳಲಾಗಿದೆ. ಈ ಬಗ್ಗೆ ಸಂಬಂಧಿತ ಶಾಲಾ ಆಡಳಿತ ಮಂಡಳಿಗಳಿಗೆ ಶಾಲೆಯ ಎಲ್ಲಾ ವಾಹನಗಳ ದಾಖಲಾತಿ, ಮಿತಿಗನುಗುಣವಾಗಿ ಮಕ್ಕಳ ಸಂಖ್ಯೆ ಹಾಗೂ ಇತರೇ ಸುರಕ್ಷತಾ ಕ್ರಮಗಳನ್ನು ಒಂದು ವಾರದ ಒಳಗೆ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಎಲ್ಲಾ ಸೌಲಭ್ಯ ಹಾಗೂ ದಾಖಲಾತಿಗಳನ್ನು ಒಂದು ವಾರದ ಓಳಗೆ ಸರಿಪಡಿಸಿಕೊಳ್ಳದಿದ್ದಲ್ಲಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಟ್ಟುನಿಟ್ಟಿನ ಆದೇಶ ನೀಡಲಾಗುವುದು. ಹರಿರಾಂ ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಡುಪಿ.