

ವಿಜಿಯವಾಣಿ ಸುದ್ದಿಜಾಲ ಉಡುಪಿ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ ಉಡುಪಿ ಜಿಲ್ಲಾ ವರದಿಗಾರ ಸಂದೀಪ ಪೂಜಾರಿ (37) ಏ.20ರಂದು ಬೆಳಗ್ಗೆ ನಿಧನರಾದರು.
ಕಾಪು ತಾಲೂಕಿನ ಶಿರ್ವ ನಿವಾಸಿಯಾಗಿದ್ದ ಸಂದೀಪ, ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನಾ ಸುದ್ದಿ ವಾಹಿನಿಯ ಕ್ಯಾಮರಾಮನ್ ಹಾಗೂ ಬಿಟಿವಿಯ ಕ್ಯಾಮರಾಮನ್ ಹಾಗೂ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಈಟಿವಿ ಭಾರತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಲೈವ್ ವಾಹಿನಿಗಳಾದ ಸಿ4ಯು, ಪೆಮ್ ಕಾರ್ಲದಲ್ಲಿ ತಂತ್ರಜ್ಞರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಅವರು ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.