ಉಡುಪಿ ಜಿಲ್ಲಾ ಎಸ್‌ಸಿ, ಎಸ್‌ಟಿ ಮೋರ್ಚಾದಿಂದ ಸಿಎಂ ಭೇಟಿ

udp-17-bjp cm
Published on

ಉಡುಪಿ: ರಾಜ್ಯ ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಎಸ್‌ಸಿ ಮತ್ತು ಎಸ್‌ಟಿ ಮೋರ್ಚಾದ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಬದ್ಧವಾಗಿದ್ದು, ಇದಕ್ಕೆ ಬೇಕಾಗುವಂತಹ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಈ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಶ್ರಮಿಸಲಾಗುವುದು ಎಂದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಎಸ್ಸಿ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಗೋಪಾಲ ಕಳಂಜಿ, ಎಸ್ಟಿ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯ್ಕ್, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯದರ್ಶಿ ಸುನೀತಾ ನಾಯ್ಕ್, ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ ಅಬೂಬಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net