ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು

ಅಂತಾರಾಷ್ಟ್ರೀಯ 12ನೇ ಯೋಗ ದಿನ.
ಅಂತಾರಾಷ್ಟ್ರೀಯ 12ನೇ ಯೋಗ ದಿನ.
Published on

* ಆರೋಗ್ಯ ಸಚಿವ ಯು.ಟಿ. ಖಾದರ್​ ಉದ್ಘಾಟನೆ

* ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆ

ಉಡುಪಿ: ಜಿಲ್ಲಾಡಳಿತ, ಜಿಪಂ, ಆಯುಷ್​ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್​ ಆ್ಯಂಡ್​ ಗೈಡ್ಸ್​, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಕಾರದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.21ರಂದು ಬೆಳಗ್ಗೆ 7 ಗಂಟೆಗೆ ಅಂತಾರಾಷ್ಟ್ರೀಯ 12ನೇ ಯೋಗ ದಿನ ಕಾರ್ಯಕ್ರಮ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್​ ಉದ್ಘಾಟಿಸಲಿದ್ದು, ಶಾಸಕ ಯಶ್​ಪಾಲ್​ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. 
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್​, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ್​ ಪೂಜಾರಿ, ಶಾಸಕರಾದ ವಿ. ಸುನೀಲಕುಮಾರ್​, ಗುರುರಾಜ್​ ಶೆಟ್ಟಿ ಗಂಟಿಹೊಳೆ, ಎ. ಕಿರಣಕುಮಾರ್​ ಕೊಡ್ಗಿ, ಗುರ್ಮೆ ಸುರೇಶ್​ ಶೆಟ್ಟಿ, ವಿಪ ಸದಸ್ಯರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್​ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕಕುಮಾರ್​ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಪಂ ಸಿಇಒ ಪ್ರತೀಕ್​ ಬಾಯಲ್​, ಜಿಲ್ಲಾ ಪೊಲೀಸ್​ ವರಿಷ್ಠ ಹರಿರಾಮ್​ ಶಂಕರ್​ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಆಯುಷ್​ ಅಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net