6 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 18ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 6 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 18ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 6 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
Published on
ಬಂಟ್ಚಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಆಶ್ರಯದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ನೇತೃತ್ವದಲ್ಲಿ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಭಾನುವಾರ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 6 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಶಾಸಕ ರಾಜೇಶ್ ನಾಕ್ ಅಧ್ಯಕ್ಷತೆ ವಹಿಸಿ, ಧರ್ಮಸ್ಥಳ ಕ್ಷೇತ್ರ ಹೊರತು ಪಡಿಸಿ ದ.ಕ.ಜಿಲ್ಲೆಯಲ್ಲಿ ಅತಿಹೆಚ್ಚು ಜೋಡಿಗೆ ಮದುವೆ ಭಾಗ್ಯ ಕರುಣಿಸಿದ ಹೆಗ್ಗಳಿಕೆ ತುಂಗಪ್ಪ ಬಂಗೇರ ಅವರಿಗೆ ಸಲ್ಲುತ್ತದೆ. ಐನ್ನೂರಕ್ಕಿಂತಲೂ ಅಧಿಕ ಜೋಡಿಗೆ ಮದುವೆ ಮಾಡಿರುವುದು ಶ್ರೇಷ್ಠ ಕೆಲಸ ಎಂದರು.
ಧಾರ್ಮಿಕ ಪರಿಷತ್ತಿನ ರವಿಶಂಕರ್ ಶೆಟ್ಟಿ ಉದ್ಘಾಟಿಸಿದರು. ವಿವಿಧ ಕ್ಷೇತ್ರದ ಸಾಧಕರಾದ ರವಿಶಂಕರ್ ಶೆಟ್ಟಿ, ವಾಕರ ದಾಸ್ ಕಾವಳಕಟ್ಟೆ, ಸಂತೋಷ್ ಎಸ್.ಸನಿಲ್, ಮೊಹಮ್ಮದ್ ರಫೀಕ್, ಸುಧೀರ್ ಪೂಜಾರಿ ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹಕಾರ ಶಿರೋಮಣಿ ಪ್ರಶಸ್ತಿ ಪುರಸ್ಕೃತ ಪ್ರಭಾಕರ ಪ್ರಭು ಅವರನ್ನು ಅಭಿನಂದಿಸಲಾಯಿತು.
ದೈಜಿ ವರ್ಲ್ಡ್ ವಾಹಿನಿ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಉದ್ಯಮಿಗಳಾದ ಹರೀಂದ್ರ ಪೈ, ಮೋಹನ್ ಶೆಟ್ಟಿ ನರ್ವಾಲ್ ದಡ್ಡ, ಬಡಗಕಜೆಕಾರು ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಸತೀಶ್ ಪೂಜಾರಿ, ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಚಂದ್ರಶೇಖರ್, ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷೆ ಶಾರದಾ, ಪಿಡಿಒ ಗೀತಾ ಹೆಗ್ಡೆ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಕ್ಲಬ್ ಅಧ್ಯಕ್ಷ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಪಿ.ಉಪಸ್ಥಿತರಿದ್ದರು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಸ್ತಾವನೆಗೈದರು. ಪ್ರಭಾಕರ ಪಿ.ಎಂ.ಸ್ವಾಗತಿಸಿದರು. ಕೃಷ್ಣ ಭಟ್ ಕಾರ್ಕಳ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net