ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ ನಾಲ್ವರು ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಸುರಿಕುಮೇರು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಆರು ಮಂದಿಗೂ ಸಣ್ಣಪುಟ್ಟಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.