ರೈತರು, ಜನಸಾಮಾನ್ಯರ ಸೇವೆಗೆ ಪ್ರಮುಖ ಆದ್ಯತೆ

73ನೇ ಅಖಿಲ ಭಾರತ ಸಹಕಾರ ಸಪ್ತಾಹ
ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಉಪ್ಪುಂದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಪ್ರಮುಖರಾದ ಡಾ.ಕೃಷ್ಣ ಕಾಂಚನ್, ಜಯಕರ ಶೆಟ್ಟಿ ಇಂದ್ರಾಳಿ, ಜಯರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಉಪ್ಪುಂದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಪ್ರಮುಖರಾದ ಡಾ.ಕೃಷ್ಣ ಕಾಂಚನ್, ಜಯಕರ ಶೆಟ್ಟಿ ಇಂದ್ರಾಳಿ, ಜಯರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Published on: 

ವಿಜಯವಾಣಿ ಸುದ್ದಿಜಾಲ ಕೋಟ

ಸಹಕಾರಿ ಸಂಸ್ಥೆಗಳು ಕೇವಲ ಲಾಭ ಗಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸದೆ, ರೈತರು ಹಾಗೂ ಜನಸಾಮಾನ್ಯರ ಸೇವೆಗೆ ಆದ್ಯತೆ ನೀಡಬೇಕು. ಜನರ ವಿಶ್ವಾಸ, ಪಾರದರ್ಶಕ ಆಡಳಿತ ಮತ್ತು ಸೇವಾ ಮನೋಭಾವವೇ ಸಹಕಾರಿ ಕ್ಷೇತ್ರದ ನಿಜವಾದ ಶಕ್ತಿ ಎಂದು ಉಪ್ಪುಂದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

ಕೋಟ ಸಹಕಾರಿ ವ್ಯವಸಾಯಕ ಸಂಘ, ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆ ಆಶ್ರಯದಲ್ಲಿ ಕೋಟದ ಬಿ.ಸಿ.ಹೊಳ್ಳ ಸಹಕಾರ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು. ಕೋಟ ಸಹಕಾರಿ ವ್ಯವಸಾಯಕ ಸಂಘ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಬೆಳ್ವೆ ಸಹಕಾರಿ ವ್ಯವಸಾಯಕ ಸಂಘ ಅಧ್ಯಕ್ಷ ಜಯರಾಮ ಶೆಟ್ಟಿ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ವೈ.ಸುಧೀರ್ ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್, ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೆ.ಶಿವಮೂರ್ತಿ, ಉಪಾಧ್ಯಕ್ಷ ರವೀಂದ್ರ ಕಾಮತ್, ನಿರ್ದೇಶಕರಾದ ಕೆ.ಉದಯ್ ಕುಮಾರ್ ಶೆಟ್ಟಿ, ಮಹೇಶ್ ಶೆಟ್ಟಿ, ರಾಘವೇಂದ್ರ ಮಧ್ಯಸ್ಥ, ರಂಜಿತ್ ಕುಮಾರ್, ಜಿ.ಅಜಿತ್ ದೇವಾಡಿಗ, ಚಂದ್ರ ಪೂಜಾರಿ ಪಿ., ವಸಂತಿ ಪೂಜಾರ್ತಿ, ಪ್ರೇಮ, ರಶ್ಮಿತಾ, ದಿನಕರ ಶೆಟ್ಟಿ, ಪಿ.ಶೇಖರ ಮರಕಾಲ ಹಾಗೂ ಕೆ.ರಾಜಾರಾಮ್ ಶೆಟ್ಟಿ ಉಪಸ್ಥಿತರಿದ್ದರು. ನಿಶಾ ಪ್ರಾರ್ಥಿಸಿದರು. ಸಂಘದ ನಿರ್ದೇಶಕ ಟಿ.ಮಂಜುನಾಥ್ ಸ್ವಾಗತಿಸಿದರು. ಸುಜಾತಾ ಬಾಯಿರಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವಂದಿಸಿದರು.

ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರಲು ಸಾಧ್ಯವಿದ್ದು, ಯುವಜನತೆ ಸಹಕಾರಿ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸಹಕಾರಿ ಕ್ಷೇತ್ರ ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಸೇವೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರಿ ಕ್ಷೇತ್ರಕ್ಕೆ ಕಲ್ಪಿಸುತ್ತಿರುವ ಹೊಸ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಬೇಕು.

| ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್