ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತದಾರರ ನೋಂದಣಾಧಿಕಾರಿ, ಜಿ.ಪಂ. ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಮೊದಲಾವರಿದ್ದರು.
Published on:
Copied
Follow Us
ಸುಳ್ಯ: ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಶೇ.91.99 ಪ್ರಗತಿ ಸಾಧಿಸಿದ್ದು ದ.ಕ. ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ತಿಂಗಳ ಕೊನೇ ವೇಳೆಗೆ ಮ್ಯಾಪಿಂಗ್ ಪ್ರಕ್ರಿಯೆ ಪೂರ್ತಿ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮತದಾರರ ನೋಂದಣಾಧಿಕಾರಿ, ಜಿ.ಪಂ. ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ ಹೇಳಿದರು.
ಸುಳ್ಯ ತಾಪಂ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಮೇಲ್ವಿಚಾರಕರ ಸಮ್ಮುಖದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಲವು ಮತಗಟ್ಟೆಗಳಲ್ಲಿ ಮ್ಯಾಪಿಂಗ್ ಕಡಿಮೆ ಇದೆ. ವಿಧಾನಸಭಾ ಕ್ಷೇತ್ರದ 82 ಮತಗಟ್ಟೆಗಳಲ್ಲಿ ಮ್ಯಾಪಿಂಗ್ ಶೇ.70ಕ್ಕಿಂತ ಕಡಿಮೆ ಇದೆ. ಅದನ್ನು ಆದ್ಯತೆಯ ಮೇರೆಗೆ ಪೂರ್ತಿ ಮಾಡಬೇಕು. ಯಾವುದೇ ಅರ್ಹ ಮತದಾರರು ಮತದಾರ ಪಟ್ಟಿಯಿಂದ ಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಪ್ರಮುಖರಾದ ಕೆ.ಗೋಕುಲ್‌ದಾಸ್, ಭವಾನಿಶಂಕರ ಕಲ್ಮಡ್ಕ, ಜಿನ್ನಪ್ಪ ಪೂಜಾರಿ, ರಶೀದ್ ಜಟ್ಟಿಪಳ್ಳ, ಡಿ.ಎಂ.ಶಾರಿಕ್ ಮತ್ತಿತರರು ಸಲಹೆ ಸೂಚನೆ ನೀಡಿದರು.
ಪ್ರತಿ ಮತಗಟ್ಟೆಯ ಮ್ಯಾಪಿಂಗ್ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಹಾಯಕ ಮತದಾರರ ನೋಂದಣಾಧಿಕಾರಿ, ತಹಸೀಲ್ದಾರ್ ಎಂ.ಮಂಜುಳಾ, ಚುನಾವಣಾ ಶಾಖೆಯ ಉಪ ತಹಸೀಲ್ದಾರ್ ಚಂದ್ರಕಾಂತ್ ಎಂ.ಆರ್. ಉಪಸ್ಥಿತರಿದ್ದರು.