ಬಸ್ಸಿನ ಬ್ಯಾಟರಿ ಇರುವಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರೆಲ್ಲರನ್ನೂ ಕೆಳಗೆ ಇಳಿಸಿದ ಪರಿಣಾಮ 10 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರೂ ಬಸ್ ಸುಟ್ಟು ಕರಕಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.