ಸುಬ್ರಹ್ಮಣ್ಯ: ಶಾರೀರಿಕ ಹಾಗೂ ಮಾನಸಿಕ ಸ್ವಾಸ್ಥೃ ಕಾಪಾಡಿಕೊಳ್ಳುವುದು ಪ್ರತಿಯೊಬ್ಬನ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯದ ರಕ್ಷಣೆ ಮಾಡಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಇಂದುಶೇಖರ ಶೆಟ್ಟಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಬಿಳಿನೆಲೆ ವಲಯ ಆಶ್ರಯದಲ್ಲಿ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಪಿ. ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಯೋಜನೆ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಸ್ತಾವನೆಗೈದರು. ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ ಸದಸ್ಯರಾದ ಗೋಪಾಲಕೃಷ್ಣ ಬಿ., ಜನಜಾಗೃತಿ ವೇದಿಕೆ ಸದಸ್ಯರಾದ ಶಿವಪ್ರಸಾದ್ ರೈ, ಶಾರದಾ ಇದ್ದರು.
ಬಿಳಿನೆಲೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ಸ್ವಾಗತಿಸಿದರು. ಪ್ರೌಢಶಾಲೆ ಮುಖ್ಯಶಿಕ್ಷಕ ಸತ್ಯಶಂಕರ್ ಭಟ್ ಎಂ. ವಂದಿಸಿದರು. ಸೇವಾ ಪ್ರತಿನಿಧಿ ಸತೀಶ್ ನಿರೂಪಿಸಿದರು.