ಕನ್ನಡ ಸಾಂಸ್ಕೃತಿಕ ದಿಬ್ಬಣಕ್ಕೆ ಅದ್ದೂರಿ ಚಾಲನೆ

 ಕೈಕಂಬ ಪೊಳಲಿ ದ್ವಾರದ ಬಳಿ ಸಾಂಸ್ಕೃತಿಕ ದಿಬ್ಬಣಕ್ಕೆ ಡಾ.ತುಕಾರಾಂ ಪೂಜಾರಿ ಚಾಲನೆ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ದೇವಪ್ಪ ಕುಲಾಲ್ ಪಂಜಿಕಲ್ಲು ಮೊದಲಾದವರಿದ್ದರು.
ಕೈಕಂಬ ಪೊಳಲಿ ದ್ವಾರದ ಬಳಿ ಸಾಂಸ್ಕೃತಿಕ ದಿಬ್ಬಣಕ್ಕೆ ಡಾ.ತುಕಾರಾಂ ಪೂಜಾರಿ ಚಾಲನೆ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ದೇವಪ್ಪ ಕುಲಾಲ್ ಪಂಜಿಕಲ್ಲು ಮೊದಲಾದವರಿದ್ದರು.
Published on
ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಸರ್ವಾಧ್ಯಕ್ಷತೆಯಲ್ಲಿ 2 ದಿನಗಳ ಕಾಲ ನಡೆಯಲಿರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಕರ್ಷಕ ಮೆರವಣಿಗೆ ಗುರುವಾರ ಸಂಜೆ ನಡೆಯಿತು.
ಬಿ.ಸಿ.ರೋಡ್‌ನ ಕೈಕಂಬ ಪೊಳಲಿ ದ್ವಾರದ ಬಳಿ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಕನ್ನಡ ಬಾವುಟ ಹಸ್ತಾಂತರಿಸುವ ಮೂಲಕ ಕನ್ನಡ ಸಾಂಸ್ಕೃತಿಕ ದಿಬ್ಬಣ ಉದ್ಘಾಟಿಸಿದರು.
ಬಣ್ಣದ ಕೊಡೆಗಳು, ಕಲಶ ಹೊತ್ತ ಮಹಿಳೆಯರು, ಕೊಂಬು, ಚೆಂಡೆ, ಕೀಲು ಕುದುರೆ, ಡೊಳ್ಳು ಕುಣಿತ, ಕುಣಿತ ಭಜನೆ, ಡೋಲು-ಕೊಳಲು ವಾದನ, ಬೆಂಕಿ ಊದುವ ಮನುಷ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ದಿಬ್ಬಣಕ್ಕೆ ವಿಶೇಷ ಮೆರುಗು ನೀಡಿದವು.
ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಸ್ವಾಗತ ಸಮಿತಿ ಪ್ರಮುಖರಾದ ದೇವಪ್ಪ ಕುಲಾಲ್ ಪಂಜಿಕಲ್ಲು, ಚಂದ್ರಹಾಸ್ ಶೆಟ್ಟಿ, ರಾಮದಾಸ ಬಂಟ್ವಾಳ, ಸುಭಾಶ್ಚಂದ್ರ ಜೈನ್, ವಿಶ್ವನಾಥ ಬಂಟ್ವಾಳ, ಕೃಷ್ಣಕುಮಾರ್ ಪೂಂಜ, ಬೇಬಿ ಕುಂದರ್, ಅಬ್ಬಾಸ್ ಅಲಿ, ರಮಾನಂದ ನೂಜಿಪ್ಪಾಡಿ, ವಿ.ಸು.ಭಟ್, ಗಣೇಶ್ ಪ್ರಸಾದ್ ಪಾಂಡೇಲು, ಪ್ರಭಾಕರ ಪ್ರಭು, ಸರಪಾಡಿ ಅಶೋಕ್ ಶೆಟ್ಟಿ, ನಾರಾಯಣ ಸಿ.ಪೆರ್ನೆ, ಸದಾಶಿವ ಬಂಗೇರ, ಮಚ್ಚೇಂದ್ರ ಸಾಲ್ಯಾನ್, ಸುಕುಮಾರ್ ಬಂಟ್ವಾಳ, ದಾಮೋದರ್ ಏರ್ಯ, ಅಬೂಬಕ್ಕರ್ ಅಮ್ಮುಂಜೆ, ಎಚ್ಕೆ ನಯನಾಡು, ಉಮರ್ ಮಂಚಿ, ರವೀಂದ್ರ ಕುಕ್ಕಾಜೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಯೋಜನಾಧಿಕಾರಿ ಜಯಾನಂದ ಪಿ. ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸಿಂಗಾರಗೊಂಡ ನಗರ

ಜಿಲ್ಲಾಮಟ್ಟದ ಕನ್ನಡ ಅಕ್ಷರ ಜಾತ್ರೆಯ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾದ ಬಿ.ಸಿ.ರೋಡು, ಕನ್ನಡ ಬಾವುಟದ ಕೆಂಪು ಹಾಗೂ ಹಳದಿ ಬಣ್ಣದಿಂದ ಕಂಗೊಳಿಸುತ್ತಿದೆ. ಬಿ.ಸಿ.ರೋಡ್ ಕೈಕಂಬದಿಂದ ಸಮ್ಮೇಳನ ನಡೆಯುವ ಸಭಾಂಗಣದವರೆಗೆ ನಗರದ ಡಿವೈಡರ್‌ಗಳಲ್ಲಿ, ಪ್ರಮುಖ ಸ್ಥಳಗಳಲ್ಲಿ, ರಿಕ್ಷಾ ಮೊದಲಾದ ವಾಹನಗಳಲ್ಲಿ ಕನ್ನಡ ಬಾವುಟ ಹಾಗೂ ಬಂಟಿಂಗ್ಸ್ ರಾರಾಜಿಸುತ್ತಿವೆ.
*ಬಿಟಿಡಬ್ಲ್ಯು_ ಮಾ 25_ 1
ಕೈಕಂಬ ಪೊಳಲಿ ದ್ವಾರದ ಬಳಿ ಸಾಂಸ್ಕೃತಿಕ ದಿಬ್ಬಣಕ್ಕೆ ಡಾ.ತುಕಾರಾಂ ಪೂಜಾರಿ ಚಾಲನೆ ನೀಡಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ದೇವಪ್ಪ ಕುಲಾಲ್ ಪಂಜಿಕಲ್ಲು ಮೊದಲಾದವರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net