ಭಕ್ತಿಯ ಸಂದೇಶ ಸಾರಿದ ಶ್ರೇಷ್ಠ ದಾರ್ಶನಿಕ

 ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಕನಕಾಭಿಯಾನ ಕಾರ್ಯಕ್ರಮ ಜರುಗಿತು.
ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಕನಕಾಭಿಯಾನ ಕಾರ್ಯಕ್ರಮ ಜರುಗಿತು.
Published on

ಕಾಸರಗೋಡು: ಸಾಮಾಜಿಕ ಸಮಾನತೆ, ಮಾನವೀಯತೆ ಹಾಗೂ ಭಕ್ತಿಯ ಸಂದೇಶವನ್ನು ತಮ್ಮ ಸಾಹಿತ್ಯದಲ್ಲಿ ಸಾರುವ ಮೂಲಕ ಕನಕದಾಸರು ಶ್ರೇಷ್ಠ ದಾರ್ಶನಿಕ ಹಾಗೂ ಸಂತ ಕವಿಯಾಗಿ ಖ್ಯಾತಿ ಗಳಿಸಿದ್ದಾರೆ ಎಂದು ಕನಕಾಭಿಯಾನದ ಕಾಸರಗೋಡು ಜಿಲ್ಲಾ ಸಂಯೋಜಕಿ ರಾಜಶ್ರೀ ಟಿ.ರೈ ಪೆರ್ಲ ಹೇಳಿದರು.

ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಮಂಗಳಗಂಗೋತ್ರಿ ಕನಕದಾಸ ಅಧ್ಯಯನ ಪೀಠದ ಕನಕದಾಸ ಸಂಶೋಧನಾ ಕೇಂದ್ರ ವತಿಯಿಂದ ಆಯೋಜಿಸಲಾದ ‘ಕನಕಾಭಿಯಾನ’ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಉಪನ್ಯಾಸ ಮತ್ತು ರಸಪ್ರಶ್ನೆ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಭಾರ ಮುಖ್ಯಶಿಕ್ಷಕ ವೇಣುಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ಸಾಯಿಸುಮಾ ನಾವಡ ಮಾಹಿತಿ ನೀಡಿದರು. ಪೆರ್ಲ ಶ್ರೀ ವಿದ್ಯಾರಣ್ಯ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ವೆಂಕಟ್ರಾಜ್ ಮಿತ್ರ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ. ಉಪಸ್ಥಿತರಿದ್ದರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು. ಕನಕದಾಸರ ಹುಟ್ಟು, ಬಾಲ್ಯ ಹಾಗೂ ಅವರ ಸಾಹಿತ್ಯಿಕ ಕೊಡುಗೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಿಸಿದರು. ಶಾಲಾ ಶಿಕ್ಷಕರಾದ ತೇಜಸ್ ಆಚಾರ್ಯ ಕೊಲ್ಲಂಗಾನ ಸ್ವಾಗತಿಸಿದರು. ಉದಯ ಶಂಕರ ಅಮೈ ನಿರೂಪಿಸಿದರು. ಕೃಷ್ಣರಾಜ ಜಿ. ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net