ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಅಗತ್ಯ

ಮೆಗಾ ಹೆಲ್ತ್ ಕ್ಯಾಂಪ್ ಡಾ.ರೋಸ್ಲಿ ಉದ್ಘಾಟಿಸಿದರು. ಪ್ರಮುಖರಾದ ಶ್ರೀಕೃಷ್ಣ ಶರ್ಮ, ಸಿಸ್ಟರ್ ಸಿಜಿ ಜಾರ್ಜ್, ಡಾ.ವಿಕ್ರಂ ಮತ್ತಿತರರು ಉಪಸ್ಥಿತರಿದ್ದರು.
ಮೆಗಾ ಹೆಲ್ತ್ ಕ್ಯಾಂಪ್ ಡಾ.ರೋಸ್ಲಿ ಉದ್ಘಾಟಿಸಿದರು. ಪ್ರಮುಖರಾದ ಶ್ರೀಕೃಷ್ಣ ಶರ್ಮ, ಸಿಸ್ಟರ್ ಸಿಜಿ ಜಾರ್ಜ್, ಡಾ.ವಿಕ್ರಂ ಮತ್ತಿತರರು ಉಪಸ್ಥಿತರಿದ್ದರು.
Published on
ಸುಬ್ರಹ್ಮಣ್ಯ: ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ಆರೋಗ್ಯ ಮುಖ್ಯ. ವರ್ಷಕ್ಕೊಮ್ಮೆಯಾದರೂ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡುವುದು ಒಳಿತು. ಆರೋಗ್ಯ ಹದಗೆಟ್ಟರೆ ಮಾನಸಿಕ ನೆಮ್ಮದಿ ಇರುವುದಿಲ್ಲ. ಆರೋಗ್ಯ ಕಾಪಾಡಲು ತಜ್ಞ ವೈದ್ಯರ ಸಲಹೆ, ಸೂಚನೆ ಪಾಲಿಸಬೇಕು ಎಂದು ಸ್ತ್ರೀರೋಗ ತಜ್ಞೆ ಸಿಸ್ಟರ್ ಡಾ.ರೋಸ್ಲಿ ಹೇಳಿದರು.
ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಆಡಳಿತದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ವೇದವ್ಯಾಸ ವಿದ್ಯಾಲಯಗಳ ಸಹಯೋಗದಲ್ಲಿ, ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕಡಬದ ಜೆ.ಎಂ.ಜೆ. ಆಸ್ಪತ್ರೆ ವತಿಯಿಂದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ಮೆಗಾ ಹೆಲ್ತ್ ಕ್ಯಾಂಪ್ ಉದ್ಘಾಟಿಸಿ ಮಾತನಾಡಿದರು.
ಜೆ.ಎಂ.ಜೆ. ಆಸ್ಪತ್ರೆಯ ಆಡಳಿತ ಅಧಿಕಾರಿ ಸಿಸ್ಟರ್ ಸಿಜಿ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ಜೆ.ಎಂ.ಜೆ. ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ರಾವ್, ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ, ಗೋಪಾಲಕೃಷ್ಣ ಪ್ರೌಢಶಾಲೆ ಮುಖ್ಯಶಿಕ್ಷಕ ಸತ್ಯಶಂಕರ ಭಟ್, ವೇದವ್ಯಾಸ ವಿದ್ಯಾಲಯದ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಕೇಶವ ಗೌಡ, ಮುಖ್ಯಶಿಕ್ಷಕ ಪ್ರಶಾಂತ್ ಬಿ. ಮೊದಲಾದವರಿದ್ದರು. ಶಿಕ್ಷಕ ವಿನೋದ್ ವಂದಿಸಿದರು. ಚಿತ್ರಕಲಾ ಅಧ್ಯಾಪಕ ದಿನೇಶ್ ಕುಂದರ್ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net