ಚಿಂತನಾ ಶಕ್ತಿಯನ್ನು ವೃದ್ಧಿಸುವ ಗ್ರಂಥಾಲಯ

 ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಡಾ.ಪುರುಷೋತ್ತಮ ಬಿಳಿಮಲೆ ಗ್ರಂಥಾಲಯಗಳಿಗೆ ಪುಸ್ತಕ ಹಸ್ತಾಂತರಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಟಣ ಮೊದಲಾದವರಿದ್ದರು.

Published on

ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಮೂಲಕ ಜ್ಞಾನ ಮತ್ತು ಚಿಂತನಾ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಶಾಲಾ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಂಥಾಲಯಗಳು ಕೇವಲ ಪುಸ್ತಕಗಳನ್ನು ಸಂಗ್ರಹಿಸುವ ಸ್ಥಳಗಳಾಗದೆ ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಕೇಂದ್ರಗಳಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಮೇರೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ಹಸ್ತಾಂತರಿಸಿ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ವಿದ್ಯಾರ್ಥಿಗಳ ಜ್ಞಾನ ವಿಕಾಸಕ್ಕೆ ಗ್ರಂಥಾಲಯಗಳು ಬಹಳ ಮುಖ್ಯವಾಗಿದ್ದು, ತಾಲೂಕಿನ ಶಾಲೆಗಳಿಗೆ ಪುಸ್ತಕಗಳನ್ನು ಒದಗಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿತ್ತು ಎಂದರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಟಣ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net