ಮೌಲ್ಯಯುತ, ಗುಣಮಟ್ಟದ ಶಿಕ್ಷಣಕ್ಕೆ ಮಾದರಿ

ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್‌ನಲ್ಲಿ ಕೌಶಲ್ ಮೇಳ
 ಶ್ರೀ ಕ್ಷೇತ್ರ ಧ.ಗ್ರಾ.ಯೋ ಬಿ.ಸಿ. ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ರೇಷ್ಮಾ ಎಸ್. ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಎಚ್.ನಾಗರಾಜ್ ಶೆಟ್ಟಿ, ಸಪ್ನಾ ಎನ್.ಶೆಟ್ಟಿ, ಭಗವತಿ, ದೀಪಕ್ ಎನ್., ಅಕ್ಷಿತಾ, ಹೇಮಾ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧ.ಗ್ರಾ.ಯೋ ಬಿ.ಸಿ. ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ರೇಷ್ಮಾ ಎಸ್. ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಎಚ್.ನಾಗರಾಜ್ ಶೆಟ್ಟಿ, ಸಪ್ನಾ ಎನ್.ಶೆಟ್ಟಿ, ಭಗವತಿ, ದೀಪಕ್ ಎನ್., ಅಕ್ಷಿತಾ, ಹೇಮಾ ಮತ್ತಿತರರು ಉಪಸ್ಥಿತರಿದ್ದರು.
Published on: 

ಹೆಬ್ರಿ: ಹೆಬ್ರಿಯ ಎಸ್.ಆರ್. ಶಿಕ್ಷಣ ಸಂಸ್ಥೆ ಮೌಲ್ಯಯುತ, ಗುಣಮಟ್ಟದ ಶಿಕ್ಷಣಕ್ಕೆ ಮಾದರಿಯಾಗಿದೆ. ಬೇರೆ ಪ್ರದೇಶದಿಂದ ಶಿಕ್ಷಣಕ್ಕಾಗಿ ಈ ಸಂಸ್ಥೆಯನ್ನು ಅರಸಿ ಬರುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ರೇಷ್ಮಾ ಎಸ್. ಹೇಳಿದರು.

ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್‌ನಲ್ಲಿ ಕೌಶಲ್ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ ಇನ್‌ಸ್ಪೈರ್ ಮಾನಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ವಿನೀಶ್ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ನಡೆಸಿದ ಜಿಲ್ಲಾಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಗೆ ಆಯ್ಕೆಯಾದ ಅದಿತಿ, ನಿಧಿ, ಪ್ರಣವು, ಅಸ್ಮಿತ್, ದಿಯಾ ಶೆಟ್ಟಿ, ಶರಣ್ ಅವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಸಂಬಂಧಿ ಮಾದರಿಗಳ ಪ್ರದರ್ಶನ ನಡೆಯಿತು.

ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್., ಕೋ-ಆರ್ಡಿನೇಟರ್ ಅಕ್ಷಿತಾ, ಹೇಮಾ ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಾನ್ವಿ ಶೆಟ್ಟಿ ನಿರೂಪಿಸಿದರು. ಸಿಯಾ ಸ್ವಾಗತಿಸಿದರು. ಪ್ರಖ್ಯಾತಿ ವಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಅನೇಕ ವರ್ಷಗಳಿಂದಲೂ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಅದೆಷ್ಟೋ ಕುಟುಂಬಗಳು ಇಂದು ಆರ್ಥಿಕವಾಗಿ ಸದೃಢತೆ ಪಡೆದುಕೊಂಡಿದೆ. ಇಂತಹ ಸಮಾಜಸೇವೆಯಿಂದ ಜನರ ಬದುಕು ಬೆಳಕಾಗಿದೆ. ಇಂದು ನಮ್ಮ ಸಂಸ್ಥೆಯಲ್ಲಿ ಆಚರಿಸುತ್ತಿರುವ ಕೌಶಲ್ ಮೇಳ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ. ಎಲ್ಲ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ.
ಎಚ್.ನಾಗರಾಜ್ ಶೆಟ್ಟಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ