ಜನರೊಂದಿಗೆ ನೇರ ಸಂವಾದಕ್ಕೆ ವೇದಿಕೆ

ರಾಜ್ಯಮಟ್ಟದ ‘ಮನ್ ಕಿ ಬಾತ್ ಸಂವಾದ’ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಎಲ್ಲ ಮಂಡಲಗಳ ಅಧ್ಯಕ್ಷರು ಭಾಗವಹಿಸಿದ್ದರು. ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಮತ್ತಿತರರಿದ್ದರು.

Published on
ಕುಂದಾಪುರ: ಮನ್ ಕಿ ಬಾತ್ ಕೇವಲ ಕಾರ್ಯಕ್ರಮವಲ್ಲ. ಪ್ರತಿ ಬೂತ್‌ನಲ್ಲಿ ಜನರೊಂದಿಗೆ ನೇರ ಸಂವಾದಕ್ಕೆ ಇರುವ ವೇದಿಕೆ. ಉಡುಪಿ ಬಿಜೆಪಿ ಜಿಲ್ಲಾ ಮಂಡಲ ತಂಡ ಕರಾವಳಿಯಲ್ಲಿ ಮಾದರಿಯಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಗನ್ನಾಥ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ಮನ್ ಕಿ ಬಾತ್ ಸಂವಾದ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲ ಮಂಡಲಗಳ ಅಧ್ಯಕ್ಷರು ಭಾಗವಹಿಸಿದ್ದರು. ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ರಾಜ್ಯ ಬಿಜೆಪಿ ಪ್ರಮುಖರು, ವಿವಿಧ ಮಂಡಲ ಅಧ್ಯಕ್ಷರು ಹಾಗೂ ಮನ್ ಕಿ ಬಾತ್ ಸಂಚಾಲಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net