ಸಂಘದಿಂದ ಸ್ವಾವಲಂಬಿ ಬದುಕಿಗೆ ಮುನ್ನುಡಿ

 ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕೋಟ ವಲಯಗಳ ಪದಗ್ರಹಣ ಕಾರ್ಯಕ್ರಮವನ್ನು ಸತೀಶ್ ಎಚ್.ಕುಂದರ್ ಉದ್ಘಾಟಿಸಿದರು. ವಸಂತ ಗಿಳಿಯಾರು, ನಾಗರಾಜ ಶೆಟ್ಟಿ, ನರೇಂದ್ರ ಕುವಾರ್ ಕೋಟ ಇದ್ದರು.
ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕೋಟ ವಲಯಗಳ ಪದಗ್ರಹಣ ಕಾರ್ಯಕ್ರಮವನ್ನು ಸತೀಶ್ ಎಚ್.ಕುಂದರ್ ಉದ್ಘಾಟಿಸಿದರು. ವಸಂತ ಗಿಳಿಯಾರು, ನಾಗರಾಜ ಶೆಟ್ಟಿ, ನರೇಂದ್ರ ಕುವಾರ್ ಕೋಟ ಇದ್ದರು.
Published on
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದಕನ್ನು ಕಾಣುತ್ತಿದ್ದಾರೆ ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಚ್.ಕುಂದರ್ ಹೇಳಿದರು.
ಭಾನುವಾರ ಕೋಟದ ಮಣೂರು ಶ್ರೀ ರಾಜಲಕ್ಷ್ಮೀ ಸಭಾಭವನದಲ್ಲಿ ಕೋಟ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಮ್ಮಿಕೊಂಡ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕೋಟ ವಲಯಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.
ಕೋಟ ವಲಯದ ವಿವಿಧ ಒಕ್ಕೂಟಗಳ ಅಧ್ಯಕ್ಷರಾದ ಗೀತಾ, ಸುಮತಿ, ರೇವತಿ ಶೆಟ್ಟಿ, ವಾಲಿನಿ, ಲಲಿತಾ ಭಾಸ್ಕರ್, ಸವಿತಾ, ಜಯಂತಿ ಒಟ್ಟು ಎಂಟು ಒಕ್ಕೂಟಗಳಿಂದ ಅಧಿಕಾರ ಹಸ್ತಾಂತರಿಸಿಕೊಳ್ಳಲಾಯಿತು. ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮೂಡುಗಿಳಿಯಾರು ಜನ ಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ನಿರ್ದೇಶಕ ನಾಗರಾಜ ಶೆಟ್ಟಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುವಾರ್ ಕೋಟ, ಕೋಟ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಕೋಟ ವಲಯ ಶೌರ್ಯ ಟಕ ಅಧ್ಯಕ್ಷ ರವೀಂದ್ರ ಆಚಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ಕೋಟ ವಲಯಾಧ್ಯಕ್ಷ ದಿನೇಶ್, ಸ್ಥಳೀಯ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಯೋಜನೆಯ ಮೇಲ್ವಿಚಾರಕ ರಮೇಶ್ ಪಿ.ಕೆ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಲಯ ಮೇಲ್ವಿಚಾರಕ ನಾಗೇಶ್ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net