ಬಡವರ ಏಳಿಗೆಗೆ ಶ್ರಮಿಸಿದ ಧೀಮಂತ

 ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿದರು. ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ಉಪನ್ಯಾಸಕಿ ಡಾ.ಪುಟ್ಟ ಲಕ್ಷ್ಮಮ್ಮ ಮೊದಲಾದವರಿದ್ದರು.
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿದರು. ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ಉಪನ್ಯಾಸಕಿ ಡಾ.ಪುಟ್ಟ ಲಕ್ಷ್ಮಮ್ಮ ಮೊದಲಾದವರಿದ್ದರು.
Published on

ಬಂಟ್ವಾಳ: ಉಳುವವನೇ ಭೂಮಿಯ ಒಡೆಯ ಕಾನೂನನನ್ನು ಜಾರಿಗೊಳಿಸುವ ಮೂಲಕ ಬಡವರು, ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಧೀಮಂತ ನಾಯಕ ದೇವರಾಜ ಅರಸು ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಹೇಳಿದರು

ಬಿ.ಸಿ.ರೋಡಿನಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ತಾಲೂಕಾಡಳಿತ, ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 111ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ.ಪುಟ್ಟಲಕ್ಷ್ಮಮ್ಮ ವಿಶೇಷ ಉಪನ್ಯಾಸ ನೀಡಿ, ಸಾಧಕರು ಚರಿತ್ರೆ ಸೃಷ್ಟಿಸುತ್ತಾರೆ. ಅಂತಹ ಸಾಧಕರ ಸಾಲಿನಲ್ಲಿ ಡಿ.ದೇವರಾಜ ಅರಸು ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದರು.
ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ಶೇಷಗಿರಿ ನಾಯಕ್ ಸ್ವಾಗತಿಸಿದರು. ವಿನುತಾ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net