ಜವಾಬ್ದಾರಿಯುತ ಕಾರ್ಯಕರ್ತರಿಂದ ಯಶಸ್ವಿ ಅಭಿಯಾನ

 ಬಿಜೆಪಿ ಪಕ್ಷದ ವತಿಯಿಂದ ನಡೆದ ಎಸ್‌ಐಆರ್ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ರಾಜೇಶ್ ನಾಕ್ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜಮ ಶಿವಪ್ರಸಾದ ಕರೋಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷದ ವತಿಯಿಂದ ನಡೆದ ಎಸ್‌ಐಆರ್ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ರಾಜೇಶ್ ನಾಕ್ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜಮ ಶಿವಪ್ರಸಾದ ಕರೋಪಾಡಿ ಮೊದಲಾದವರು ಉಪಸ್ಥಿತರಿದ್ದರು.
Published on
ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಎಸ್‌ಐಆರ್ ಅಭಿಯಾನ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯುತವಾಗಿ ಕೈಗೊಳ್ಳಬೇಕು ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.
ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಜ್ಯೋತಿ ಹೆಗ್ಡೆ ಅವರ ನಿವಾಸದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಎಸ್‌ಐಆರ್ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಬೂತ್ ಮಟ್ಟದ ಕಾರ್ಯಚಟುವಟಿಕೆ ಚುರುಕುಗೊಳಿಸುವುದು ಹಾಗೂ ಸಂಘಟನೆ ಮತ್ತಷ್ಟು ಬಲಪಡಿಸುವ ಕುರಿತು ಸಮಗ್ರ ಚರ್ಚೆ ನಡೆಯಿತು.
ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ ಹಾಗೂ ಶಿವಪ್ರಸಾದ ಕರೋಪಾಡಿ, ಪ್ರಮುಖರಾದ ಬಿ.ದೇವದಾಸ್ ಶೆಟ್ಟಿ, ಮಾಧವ ಮಾವೆ, ಸನತ್ ಕುಮಾರ್ ರೈ, ಮಹಾಬಲ ಪೂಜಾರಿ, ನಾಗೇಶ್ ಬಂಡಾರಿ, ಸುಜಾತಾ, ಹೇಮಂತ ತಾಲಿಪಡ್ಪು, ಗೀತಾ ಚಂದ್ರಶೇಖರ್, ತನಿಯಪ್ಪ ಗೌಡ, ಪುಷ್ಪರಾಜ್ ಚೌಟ, ಶಿವರಾಮ್ ಶೆಟ್ಟಿ, ಉಮೇಶ್ ಪೂಜಾರಿ, ರಮೇಶ್ ಗೌಡ, ಮೋನಪ್ಪ ಗೌಡ, ದಿನೇಶ್, ನವೀನ್ ಆಚಾರ್ಯ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net