ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ದೇಗುಲ ಶಾಲೆ

ಹಟ್ಟಿಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 110ನೇ ವರ್ಷದ ಸಂಭ್ರಮ, ನೂತನ ಕಟ್ಟಡ ಉದ್ಘಾಟನೆ, ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಗ್ರಾಪಂ ಸದಸ್ಯರಾದ ರಾಜೀವ ಶೆಟ್ಟಿ, ಅಮೃತಾ ಪಿ.ಭಂಡಾರಿ, ಚಂದ್ರ ಮೊಗವೀರ, ಹಟ್ಟಿಕುದ್ರುವಿನ ನರೇಂದ್ರ ಉಡುಪ ಮೊದಲಾದವರು ಉಪಸ್ಥಿತರಿದ್ದರು.
ಹಟ್ಟಿಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 110ನೇ ವರ್ಷದ ಸಂಭ್ರಮ, ನೂತನ ಕಟ್ಟಡ ಉದ್ಘಾಟನೆ, ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಗ್ರಾಪಂ ಸದಸ್ಯರಾದ ರಾಜೀವ ಶೆಟ್ಟಿ, ಅಮೃತಾ ಪಿ.ಭಂಡಾರಿ, ಚಂದ್ರ ಮೊಗವೀರ, ಹಟ್ಟಿಕುದ್ರುವಿನ ನರೇಂದ್ರ ಉಡುಪ ಮೊದಲಾದವರು ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಹಟ್ಟಿಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 110ನೇ ವರ್ಷದ ಸಂಭ್ರಮ, ನೂತನ ಕಟ್ಟಡ ಉದ್ಘಾಟನೆ, ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶನಿವಾರ ನಡೆಯಿತು.
ಬೆಳಗ್ಗೆ ನೂತನ ಕಟ್ಟಡವನ್ನು ಜಿ.ಶಂಕರ್ ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಿದರು.
ಸಂಜೆ ರಾಮಚಂದ್ರ ಭಟ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಬ್ಯಾಂಕ್‌ನ ಉಡುಪಿಯ ಪ್ರಾದೇಶಿಕ ಕಚೇರಿ ಸಹಾಯಕ ಮಹಾ ಪ್ರಬಂಧಕ ರಮೇಶ್ ವೈದ್ಯ ಮಾತನಾಡಿ, ಶಾಲೆಗಳು ಕೇವಲ ಶಾಲೆಗಳಲ್ಲ. ಅದು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ದೇಗುಲ.ಒಬ್ಬ ವಿದ್ಯಾರ್ಥಿಯನ್ನು ಸಮಾಜಕ್ಕೆ ಉತ್ತಮ ಪ್ರಜೆಯಾಗಿಸುವಲ್ಲಿ ಪಾಲಕರು, ಶಿಕ್ಷಕರ ಪಾತ್ರ ಪ್ರಮುಖವಾದುದು. ಎಲ್ಲ ಕಡೆಗಳಲ್ಲೂ ಸರ್ಕಾರಿ ಶಾಲೆಗಳಲ್ಲಿ ಕಲಿತವರಿಗೆ ಹೆಚ್ಚಿನ ಆದ್ಯತೆ ಕೊಡುವಂತಾಗಬೇಕು ಎಂದರು.
 ಹಟ್ಟಿಯಂಗಡಿ ಗ್ರಾಪಂ ಅಧ್ಯಕ್ಷೆ ನಾಗರತ್ನಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ, ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್ ಮಾತನಾಡಿದರು. ಗ್ರಾಪಂ ಸದಸ್ಯರಾದ ರಾಜೀವ ಶೆಟ್ಟಿ, ಅಮೃತಾ ಪಿ.ಭಂಡಾರಿ, ಚಂದ್ರ ಮೊಗವೀರ, ಹಟ್ಟಿಕುದ್ರುವಿನ ನರೇಂದ್ರ ಉಡುಪ, ಎಸ್‌ಡಿಎಂಸಿ ಅಧ್ಯಕ್ಷೆ ಪಾರ್ವತಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಮಂಜುನಾಥ ಶೆಟ್ಟಿ, ಜೈನ ಬಸದಿಯ ಸುರೇಂದ್ರ ಕುಮಾರ್ ಜೈನ್, ಉದ್ಯಮಿ ಕರುಣಾಕರ ಶೆಟ್ಟಿ, ಧರ್ಮಸ್ಥಳ ಯೋಜನೆಯ ಹಟ್ಟಿಯಂಗಡಿ ಒಕ್ಕೂಟ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಪ್ರಮುಖರಾದ ಪ್ರಭಾವತಿ ಶೆಟ್ಟಿ, ಸಂಗೀತಾ ಶೆಟ್ಟಿ, ಗೋವಿಂದ ರಾಜ್ ಶೆಟ್ಟಿ ಹಟ್ಟಿಯಂಗಡಿ, ಕುಷ್ಠ ದೇವಾಡಿಗ, ಧರಣೇಂದ್ರ ಅರಸ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
 ಹೆಮ್ಮಾಡಿ ಮೀನುಗಾರರ ಸಹಕಾರಿ ಸೇವಾ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಳೇ ವಿದ್ಯಾರ್ಥಿ ಉದಯ ಕುಮಾರ್ ಹಾಗೂ ಸುಮತಿ ದಂಪತಿಗೆ ಹುಟ್ಟೂರ ಗೌರವ ಸಲ್ಲಿಸಲಾಯಿತು. ಶಿಕ್ಷಕರಿಗೆ ಗುರುವಂದನೆ, ದಾನಿಗಳನ್ನು ಗೌರವಿಸಲಾಯಿತು.
ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ವಿನೋದಾ ವಂದಿಸಿದರು. ಹಳೇ ವಿದ್ಯಾರ್ಥಿ ಸಂಘ ಕಾರ್ಯದರ್ಶಿ ಮಹೇಶ್ ದೇವಾಡಿಗ ಎಚ್. ಕಾರ್ಯಕ್ರಮ ನಿರೂಪಿಸಿದರು.

110 ವರ್ಷಗಳ ಇತಿಹಾಸ ಹೊಂದಿರುವ ಹಟ್ಟಿಯಂಗಡಿ ಶಾಲೆ ಸಾವಿರಾರು ಸಾಧಕರನ್ನು ಸಮಾಜಕ್ಕೆ ಕೊಟ್ಟ ಹೆಮ್ಮೆಯ ಸಂಸ್ಥೆ. ಹಳೇ ವಿದ್ಯಾರ್ಥಿಗಳ ಪರಿಶ್ರಮದಿಂದ ಕೊಠಡಿ ಸಿದ್ಧವಾಗಿದೆ. ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಪಠ್ಯ ಆರಂಭಿಸುವ ಗುರಿಯಿದೆ. ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಹಳೇ ವಿದ್ಯಾರ್ಥಿಗಳ ಪಾತ್ರ ಹಿರಿದು. ಈ ಶಾಲೆಯನ್ನು ಎಲ್ಲರೂ ಸೇರಿ ಉಳಿಸಿಕೊಳ್ಳೋಣ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net