ಬಸ್ ನಿಲ್ದಾಣದಲ್ಲಿ ತಲವಾರು ಜಳಪಿಸಿ ಆತಂಕ ಸೃಷ್ಟಿಸಿದ ಯುವಕ

ಯುವಕನೊಬ್ಬ ತಲವಾರು ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದಾನೆ
ಯುವಕನೊಬ್ಬ ತಲವಾರು ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದಾನೆ
Published on
ಮೂಡುಬಿದಿರೆ: ಇಲ್ಲಿನ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ಯುವಕನೊಬ್ಬ ತಲವಾರು ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದಾನೆ. ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಪೊಲೀಸರು ಆರೋಪಿ ಬಂಟ್ವಾಳ ನಿವಾಸಿ ರಾಜೇಶ್ ಎಂಬಾತನನ್ನು ವಶಕ್ಕೆ ಪಡೆದು ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.
ರಾಜೇಶ್ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿ, ಅಂಗಡಿಯಲ್ಲಿದ್ದ ಯುವಕನಿಗೆ ತಲವಾರು ತೋರಿಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಭಯಭೀತರಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ರಾಜೇಶ್‌ನನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆಯಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ರಾಜೇಶ್ ಅಮಲು ಪದಾರ್ಥ ಸೇವಿಸಿದ್ದ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ ರಾಜೇಶ ತಾನು ವಾಮದಪದವು ನಿವಾಸಿಯಾಗಿದ್ದು, ಪ್ರಸ್ತುತ ಪೆರಿಂಜೆಯ ಬಡಕೋಡಿಯಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ತನ್ನ ಬಳಿ ಇದ್ದ ತಲವಾರನ್ನು ಕೋಟೆಬಾಗಿಲಿನ ಸಂದೇಶ್ ನೀಡಿದ್ದಾನೆ ಎಂದು ವಿಚಾರಣೆಯಲ್ಲಿ ಹೇಳಿರುವುದಾಗಿ ತಿಳಿದು ಬಂದಿದೆ.

ಈ ಮಾಹಿತಿ ಆಧರಿಸಿ ಪೊಲೀಸರು ಸಂದೇಶ್‌ನನ್ನೂ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದು, ತಲವಾರು ನೀಡಿದ ಹಿನ್ನೆಲೆ ಹಾಗೂ ಘಟನೆಯ ಉದ್ದೇಶ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net