ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸ್ಥಳೀಯರಾದ ವಲೇರಿಯನ್ ಸಿಕ್ವೇರ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸದೆ ಹಳೇ ರಸ್ತೆಯಲ್ಲಿಯೇ ಹೆದ್ದಾರಿ ಪ್ರಾಧಿಕಾರದ ಭಾರಿ ವಾಹನಗಳು ಸಂಚಾರ ಮಾಡುತ್ತಿವೆ. ಇದರಿಂದಾಗಿ ರಸ್ತೆಯ ಡಾಂಬರು ಕಿತ್ತು ಬಂದಿದ್ದು, ಹೊಂಡಗಳಾಗಿ ರಸ್ತೆ ಹಾಳಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.