ಅಪಘಾತ ಗಾಯಾಳು ಮೃತ್ಯು

Death
Death
Published on

ಕುಂದಾಪುರ: ತಲ್ಲೂರು ಗ್ರಾಮದ ರಾ.ಹೆ.66ರಲ್ಲಿ ತಲ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಸ್ಕೂಟರ್‌ನಲ್ಲಿ ಬರುತ್ತಿರುವಾಗ ನಾಯಿ ಅಡ್ಡ ಬಂದಿದ್ದು, ರಸ್ತೆಗೆ ವಾಹನ ಸಹಿತವಾಗಿ ಬಿದ್ದು ಗಾಯಗೊಂಡಿದ್ದ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತ ಸಂದರ್ಭ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಾಧಿಕಾರಿ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net