ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಮಾತನಾಡಿದರು. ಶಾಹುಲ್ ಹಮೀದ್ ಕುತ್ತಮೊಟ್ಟೆ, ರಾಜಣ್ಣ ಉಪಸ್ಥಿತರಿದ್ದರು.
Published on:
Copied
Follow Us
ಸುಳ್ಯ: ಮೃತಪಟ್ಟಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮೆಯಾದ ಹಣವನ್ನು ಅವರ ವಾರಸುದಾರರು ಎಟಿಎಂ ಮೂಲಕ ಪಡೆದು ಸರ್ಕಾರಕ್ಕೆ ವಂಚಿಸಿರುವುದು ವಿಷಾದನೀಯ. ಅದನ್ನು ಮರು ಪಾವತಿಸದೆ ಇದ್ದಲ್ಲಿ ಸರ್ಕಾರಿ ಸೌಲಭ್ಯ ಪಡೆಯಲು ಸಮಸ್ಯೆಯಾಗಬಹುದು. ಮೃತ ಫಲಾನುಭವಿಗಳ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ಮರುಪಾವತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುಳ್ಯ ತಾಪಂ ಸಭಾಂಗಣದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗೃಹಲಕ್ಷ್ಮಿಯೋಜನೆಯಲ್ಲಿ ಇದೀಗ 31ನೇ ಕಂತಿನ ಹಣ ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು. ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಕುರಿತು ಚರ್ಚೆ ನಡೆಯಿತು. ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಪರಿಶೀಲನೆ ಪ್ರಗತಿ ಬಗ್ಗೆ ಮೆಸ್ಕಾಂ ಇಂಜಿನಿಯರ್‌ಗಳು ಮಾಹಿತಿ ನೀಡಿದರು.
ಯುವನಿಧಿಗೆ ಸಂಬಂಧಿಸಿದಂತೆ ಯುವನಿಧಿ ಪಡೆದ ಫಲಾನುಭವಿಗಳ ಪೈಕಿ ಎಷ್ಟು ಮಂದಿ ಉದ್ಯೋಗ ಪಡೆದಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಸದಸ್ಯ ಕಾರ್ಯದರ್ಶಿ ರಾಜಣ್ಣ ಉಪಸ್ಥಿತರಿದ್ದರು.