

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟಿ ಅನುಷಾ ರೈ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ನವದುರ್ಗಾ ಲೇಖನವನ್ನು ಬರೆದು ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು. ದೇವಳ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮತ್ತಿತರರಿದ್ದರು.