ಅಧಿಕಾರ ಹಸ್ತಾಂತರ ಪ್ರಹಸನದಿಂದ ಆಡಳಿತ ಸ್ತಬ್ಧ

 ಮಂಗಳೂರು ಸಂಘನಿಕೇತನದಲ್ಲಿ ಪ್ರಶಿಕ್ಷಣ ಮಹಾಭಿಯಾನವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ರಾಜೇಶ್ ನಾಕ್, ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.
ಮಂಗಳೂರು ಸಂಘನಿಕೇತನದಲ್ಲಿ ಪ್ರಶಿಕ್ಷಣ ಮಹಾಭಿಯಾನವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ರಾಜೇಶ್ ನಾಕ್, ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಮಂಗಳೂರು
ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರ ಹಸ್ತಾಂತರ ಪ್ರಹಸನದಿಂದ ಆಡಳಿತ ಯಂತ್ರವೇ ಸ್ತಬ್ಧಗೊಂಡಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಜನತೆಗೆ ಮನವರಿಕೆ ಮಾಡುವುದು ಬಿಜೆಪಿ ಕಾರ್ಯಕರ್ತರ ಕರ್ತವ್ಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-26ರ ಅಂಗವಾಗಿ ಸೋಮವಾರ ಸಂಘನಿಕೇತನದಲ್ಲಿ ಎರಡು ದಿನಗಳ ದ.ಕ. ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ವರ್ಗ, ದಲಿತರ ಬಗ್ಗೆ ಕಾಂಗ್ರೆಸ್ ನಾಯಕರು ಸದಾ ಮಾತನಾಡುತ್ತಾರೆ. ಆದರೆ ರಾಜ್ಯದಲ್ಲಿ 1.5 ಲಕ್ಷ ದಲಿತ, ಹಿಂದುಗಳಿದ ವರ್ಗಗಳ ವಿದ್ಯಾರ್ಥಿಗಳು ಹಾಸ್ಟೆಲ್ ಇಲ್ಲದೆ ಪರದಾಡುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಆರೋಗ್ಯ, ಶಿಕ್ಷಣಕ್ಕಾಗಿ ಮೀಸಲಿಟ್ಟ 60 ಸಾವಿರ ಕೋಟಿ ರೂ.ಗಳನ್ನು ಸಿದ್ದರಾಮಯ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, 2014ರ ಬಳಿಕ ಭಾರತ ಬದಲಾಗಿದೆ. ಬಿಜೆಪಿ ಗೆಲ್ಲಲು ಸಾಧ್ಯವೇ ಇಲ್ಲ ಎಂಬಂತಿದ್ದ ಪಶ್ಚಿಮ ಬಂಗಾಳದಲ್ಲಿ ಈಗ ಬಿಜೆಪಿ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮೇಲಿನ ಜನರ ಆಕ್ರೋಶಕ್ಕೆ ಧ್ವನಿಯಾಗಿ ಬಿಜೆಪಿ ಕಾರ್ಯನಿರ್ವಹಿಸಬೇಕು ಎಂದರು.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ರಾಜೇಶ್ ನಾಕ್, ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಯಶ್‌ಪಾಲ್ ಸುವರ್ಣ, ಎಂಎಲ್‌ಸಿ ಕಿಶೋರ್‌ಕುವಾರ್ ಪುತ್ತೂರು, ಪ್ರಶಿಕ್ಷಣ ವಿಭಾಗ ಸಂಚಾಲಕ ಉದಯಕುವಾರ್ ಶೆಟ್ಟಿ, ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು. ಜಿಲ್ಲಾ ಪ್ರಶಿಕ್ಷಣ ಮಹಾಭಿಯಾನ ಸಂಚಾಲಕ ಯತೀಶ್ ಆರ್ವಾರ್ ಸ್ವಾಗತಿಸಿದರು. ಸಹ ಸಂಚಾಲಕ ನಿತೀಶ್ ಕುವಾರ್ ಶಾಂತಿವನ ವಂದಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇವಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಾಕ್ರೋಚ್ ಪಾರ್ಟಿ ಎನ್ನುವ ಹೆಸರಿನಲ್ಲಿ ಬಿಜೆಪಿಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರ ನಡೆಯುತ್ತಿದೆ. ಜಿರಳೆಗಳಿಗೆ ಹೆದರುವ ಕಾಲ ಇದಲ್ಲ. ದೇಶದ ಚಿನ್ನವನ್ನು ವಿದೇಶಕ್ಕೆ ಅಡವಿಟ್ಟ ಕಾಲವೊಂದಿತ್ತು. ಇಂದು ಭಾರತ 60 ರಾಷ್ಟ್ರಗಳಿಗೆ ಸಾಲ ನೀಡುತ್ತಿದೆ. ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರುವ ಪರಿಸ್ಥಿತಿ ಈಗ ಇಲ್ಲ.

— ಕೋಟ ಶ್ರೀನಿವಾಸ ಪೂಜಾರಿ, ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net