

ದೇವಸ್ಥಾನಗಳ ನಿರ್ಮಾಲ್ಯ ಹೂವುಗಳು ಪವಿತ್ರವಾಗಿರುತ್ತವೆ. ಇವುಗಳನ್ನು ತ್ಯಾಜ್ಯವಾಗಿ ಎಸೆಯುವ ಬದಲು ಮರುಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅಗರಬತ್ತಿ ತಯಾರಿಸಲಾಗುತ್ತಿದೆ. 21 ಲಕ್ಷ ಯೋಜನಾ ವೆಚ್ಚ ಅಂದಾಜಿಸಲಾಗಿದ್ದು, ಖಾಸಗಿ ಕಂಪೆನಿಗಳ ಸಿಎಸ್ಆರ್ ನಿಧಿಯಿಂದ ಭರಿಸಲಾಗುತ್ತಿದೆ. ಯೋಜನೆಯಿಂದ ಗ್ರಾಮೀಣ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹಾಗೂ ಗೌರವಯುತ ಉದ್ಯೋಗ ಕಲ್ಪಿಸಲಾಗುತ್ತದೆ. ಮಹಿಳೆಯರು ಸ್ವಯಂಪ್ರೇರಿತರಾಗಿ ರುಡ್ಸೆಟ್ ನಲ್ಲಿ ತರಬೇತಿ ಪಡೆದಿದ್ದು, ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲ ರೀತಿಯ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ನೀಡಲಾಗುವುದು.
— ಸ್ವರೂಪಾ ಟಿ. ಕೆ., ಜಿಲ್ಲಾಧಿಕಾರಿ, ಉಡುಪಿ