ಸಮವಸ್ತ್ರ ಕೊಡುಗೆಯಾಗಿ ನೀಡಿದ ಉಡುಪಿ ಪೋಲಿಸ್ ಇಲಾಖೆಯ ಜಯಕರ್ ಐರೋಡಿ ಹಾಗೂ ಬೇಲ್ಟ್, ಐಡಿ ಕಾರ್ಡ್, ಬ್ಯಾಗ್ ನೀಡಿದ ಬಾಂಧವ್ಯ ಕರ್ನಾಟಕದ ದಿನೇಶ್ ಬಾಂಧವ್ಯ ಅವರನ್ನು ಸನ್ಮಾನಿಸಲಾಯಿತು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಶಿಕ್ಷಣ ಸಂಯೋಜಕಿ ಅನ್ನಪೂರ್ಣೇಶ್ವರಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಹಂಗಾರಕಟ್ಟೆ ಕ್ಲಸ್ಟರ್ ಮಾಲಿನಿ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್, ಐರೋಡಿ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆನಂದ್ ಗಾಣಿಗ, ಎಸ್‌ಡಿಎಂಸಿ ಉಪಾಧ್ಯಕ್ಷ ಶೇಖರ್ ಪೂಜಾರಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷೆ ಪ್ರಣೀತಾ ಶೆಟ್ಟಿ ಉಪಸ್ಥಿತರಿದ್ದರು.