ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾಲೇಜಿನ ಹಳೇ ವಿದ್ಯಾರ್ಥಿ, ಉಚ್ಚ ನ್ಯಾಯಾಲಯದ ವಕೀಲ ಜಿತಿನ್ ಜಿಜೋ ಮಾತನಾಡಿ, ಮಕ್ಕಳ ಲೈಂಗಿಕ ಕಿರುಕುಳ ತಡೆ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಕಿರುಕುಳ ವಿರುದ್ಧದ ಕಾನೂನು, ಮಾದಕ ವಸ್ತುಗಳ ದುರುಪಯೋಗ ಮತ್ತು ಅದರ ಪರಿಹಾರ ಕ್ರಮಗಳು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾನೂನುಗಳ ಕುರಿತು ಮಾಹಿತಿ ನೀಡಿದರು.