ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಆರಂಭದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ನಡೆಯಲಿದೆ. ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ. ಎಲ್ಲರಿಗೂ ಉಚಿತ ಪ್ರವೇಶವಿರಲಿದೆ ಎಂದು ಮಾಹಿತಿ ನೀಡಿದರು.