ಕಳೆದ ವರ್ಷದ ಆಳ್ವಾಸ್ ಪ್ರಗತಿಯಲ್ಲಿ 2,873 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 3,734 ಮಂದಿ ಮುಂದಿನ ಹಂತದ ನೇಮಕಾತಿಗೆ ಆಯ್ಕೆಯಾಗಿದ್ದರು. ಇದುವರೆಗೆ ಒಟ್ಟು 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ಮುಂದಿನ ಹಂತಕ್ಕೆ ಶಾರ್ಟ್ಲಿಸ್ಟ್ ಆಗಿದ್ದಾರೆ. ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಐಟಿಐ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನೂ ಒದಗಿಸಲಾಗುತ್ತದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ನೋಂದಣಿ ಕಡ್ಡಾಯವಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್ ಸಿ.ಎಸ್. ಹಾಗೂ ಆಳ್ವಾಸ್ ಅಂಬಾಸಿಡರ್ ಈಶ್ವರ್ ಮಲ್ಪೆ ಉಪಸ್ಥಿತರಿದ್ದರು.