ಐಬಿಎಂ ಇಂಡಿಯಾದ ವಾಟ್ಸನ್‌ಎಕ್ಸ್ ಎಐ ವಿಭಾಗದ ಕಾರ್ಯಕ್ರಮ ನಿರ್ದೇಶಕ, ಮುಖ್ಯಸ್ಥ ರತೀಶ್ ಮುರಳೀಧರನ್ ಮಾತನಾಡಿ, ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಸ್ಥಾಪಿಸಿದ ಇಂಜಿನಿಯರಿಂಗ್ ಕಾಲೇಜಾಗಿ ಆಳ್ವಾಸ್ ಹೊಸ ಮೈಲಿಗಲ್ಲು ನಿರ್ಮಿಸಿದೆ. ಎಐ ತಂತ್ರಜ್ಞಾನವು ಜ್ಞಾನವನ್ನು ಎಲ್ಲರಿಗೂ ಸುಲಭವಾಗಿ ತಲುಪಿಸುವ ಶಕ್ತಿಯುತ ಸಾಧನವಾಗಿದೆ. ಆದರೆ ಭವಿಷ್ಯದ ಯಶಸ್ಸು ಕೇವಲ ತಂತ್ರಜ್ಞಾನದಿಂದ ನಿರ್ಧಾರವಾಗುವುದಿಲ್ಲ. ಕಲಿಯುವ ಆಸಕ್ತಿ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ, ಸಮಾಜಕ್ಕೆ ಉಪಯುಕ್ತ ಪರಿಹಾರಗಳನ್ನು ಕಂಡುಹಿಡಿಯುವ ಮನೋಭಾವವೂ ಅಷ್ಟೇ ಮುಖ್ಯ ಎಂದರು.