ಭಾರತದ ವಿಭಿನ್ನ ಸಂಸ್ಕೃತಿ ಒಗ್ಗೂಡಿಸುವ ಪ್ರಯತ್ನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಶನಿವಾರ ಆಯೋಜಿಸಲಾದ ಸಂಪ್ರದಾಯ ದಿನ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್-ಗೀತಾ ದಂಪತಿಯನ್ನು ಗೌರವಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ನಟ ರಾಹುಲ್ ಅಮೀನ್, ಶೈಲಶ್ರೀ ಮೂಲ್ಕಿ ಮೊದಲಾದವರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಶನಿವಾರ ಆಯೋಜಿಸಲಾದ ಸಂಪ್ರದಾಯ ದಿನ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್-ಗೀತಾ ದಂಪತಿಯನ್ನು ಗೌರವಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ನಟ ರಾಹುಲ್ ಅಮೀನ್, ಶೈಲಶ್ರೀ ಮೂಲ್ಕಿ ಮೊದಲಾದವರಿದ್ದರು.
Published on
ಮೂಡುಬಿದಿರೆ: ಎಲ್ಲರನ್ನೂ ಒಳಗೊಳ್ಳುವುದೇ ಕನ್ನಡ- ಕರ್ನಾಟಕದ ಸಂಸ್ಕೃತಿ. ಭಾರತದ ವಿಭಿನ್ನ ಸಂಸ್ಕೃತಿ ಒಗ್ಗೂಡಿರುವುದನ್ನು ನಾನು ಇಲ್ಲಿ ಕಂಡೆ. ನೀವೆಲ್ಲ ಹೀಗೆಯೇ ಮುಂದೆಯೂ ಜತೆಯಾಗಿ ಜೀವಿಸಿ, ಎಲ್ಲರೂ ಒಂದಾಗಿ ಬದುಕಿ ಸಾಧಿಸೋಣ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
ವಿದ್ಯಾಗಿರಿಯ ಕೃಷಿ ಸಿರಿ ಆವರಣದ ಮುಂಡ್ರೆದಗುತ್ತು ಕೆ.ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಸಂಪ್ರದಾಯ ದಿನ 2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿ ಕೌಶಿಕ್ ಬರೆದ ಚಿತ್ರವನ್ನು ಶಿವರಾಜ್ ದಂಪತಿಗೆ ನೀಡಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ೋಹನ ಆಳ್ವ, ಗೀತಾ ಶಿವರಾಜ್‌ಕುಮಾರ್, ನಟ ರಾಹುಲ್ ಅಮೀನ್, ಶೈಲಶ್ರೀ ಮೂಲ್ಕಿ, ದಿಶಾ ಶೆಟ್ಟಿ ಹಾಗೂ ಸಾಹಿಲ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಸಮೂಹ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ನಿತೇಶ್ ಮಾರ್ನಾಡ್ ಕಾರ್ಯಕ್ರಮ ನಿರೂಪಿಸಿದರು.
ಮಹಾರಾಷ್ಟ್ರ, ಗುಜರಾತ್, ಈಶಾನ್ಯ ಭಾರತ, ಕೇರಳ, ಕರಾವಳಿ ಕರ್ನಾಟಕ, ಇತರೆ ಭಾರತ ಸೇರಿದಂತೆ ಆರು ತಂಡಗಳು ತಮ್ಮ ತವರೂರಿನ ಕಲಾ ಪ್ರಕಾರವನ್ನು ಪ್ರದರ್ಶಿಸಿದರು. ಸಾಂಸ್ಕೃತಿಕ ಕಲಾಕೃತಿಗಳಿಂದ ಸಿಂಗರಿಸಲ್ಪಟ್ಟ ಆವರಣದಲ್ಲಿ ಸಾಂಪ್ರದಾಯಿಕ ಉಡುಗೆ-ತೊಡುಗೆ ತೊಟ್ಟ ವಿದ್ಯಾರ್ಥಿಗಳೇ ಪ್ರಮುಖ ಆಕರ್ಷಣೆಯಾಗಿದ್ದರು. ವಿವಿಧ ರಾಜ್ಯಗಳ ಖಾದ್ಯಗಳು ಗಮನಸೆಳೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net