ವೈವಿಧ್ಯತೆಯಿಂದ ವಿಶ್ವ ಮಾನವತೆ ಕಟ್ಟುವ ಪ್ರಯತ್ನ

 ವಿವೇಕವಾಣಿ ಉಪನ್ಯಾಸ ಕಾರ್ಯಕ್ರಮವನ್ನು ಬೆಂಗಳೂರಿನ ಸ್ವಾಮಿ ವಿವೇಕಾನಂದ ಶೈಕ್ಷಣಿಕ ಗೌರವ ಶೈಕ್ಷಣಿಕ ನಿರ್ದೇಶಕ ಡಾ.ಎಚ್.ಎನ್ ಮುರಳೀಧರ ಉದ್ಘಾಟಿಸಿದರು. ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ.ನಾಗಪ್ಪ ಗೌಡ, ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ, ಡಾ.ಯಶು ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ವೈವಿಧ್ಯತೆಯಿಂದ ವಿಶ್ವ ಮಾನವತೆ ಕಟ್ಟುವ ಪ್ರಯತ್ನಗಳ ಜತೆ ಏಕಸೂತ್ರ ಕಂಡುಕೊಳ್ಳಬೇಕಿದೆ ಎಂಬುದು ಸ್ವಾಮಿ ವಿವೇಕಾನಂದರ ನಿಲುವಾಗಿತ್ತು ಎಂದು ಬೆಂಗಳೂರಿನ ಸ್ವಾಮಿ ವಿವೇಕಾನಂದ ಶೈಕ್ಷಣಿಕ ಗೌರವ ಶೈಕ್ಷಣಿಕ ನಿರ್ದೇಶಕ ಡಾ.ಎಚ್.ಎನ್.ಮುರಳೀಧರ ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ವತಿಯಿಂದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಗುರುವಾರ ಪ್ರೊ.ವಿವೇಕ್ ರೈ ವಿಚಾರ ವೇದಿಕೆಯಲ್ಲಿ ನಡೆದ ವಿವೇಕವಾಣಿ ‘ಸ್ವಾಮೀ ವಿವೇಕಾನಂದರ ವಿಶ್ವಧರ್ಮ ಆದರ್ಶ’ ವಿಷಯದಲ್ಲಿ ಉಪನ್ಯಾಸ ನೀಡಿದರು.'
ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ.ನಾಗಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ, ಡಾ.ಯಶು ಕುಮಾರ್, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿವೇಕಾನಂದ ಅಧ್ಯಯನ ಕೇಂದ್ರ ಸಂಯೋಜಕ ಡಾ.ಚಂದ್ರು ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕ ಪ್ರೊ.ಸೋಮಣ್ಣ ಹೊಂಗಳ್ಳಿ ವಂದಿಸಿದರು. ವಿದ್ಯಾರ್ಥಿ ದುಶ್ಯಂತ್ ನಿರೂಪಿಸಿದರು.

ನಮ್ಮ ದೇಶದಲ್ಲಿ ಅನೇಕ ದಾರ್ಶನಿಕರು, ಮಹಾತ್ಮರು ಬಂದು ಹೋಗಿದ್ದಾರೆ. ಆದರೆ ಇತ್ತೀಚೆಗೆ ಅವರ ತತ್ವ, ಸಿದ್ಧಾಂತದ ಪಾಲನೆ ಬದಲಾಗಿ ಆರಾಧನೆ ರೂಪದಲ್ಲಿ ಹೆಚ್ಚಾಗಿ ಕಾಣುವಂತಾಗಿದೆ. ಯುವಕರನ್ನು ಸರಿಯಾದ ಪಥದಲ್ಲಿ ಕೊಂಡೊಯ್ಯುವ ಪ್ರಯತ್ನ ಸ್ವಾಮಿ ವಿವೇಕಾನಂದರ ಆದರ್ಶ, ತತ್ವ ಸಿದ್ಧಾಂತಗಳಿಂದ ಆಗಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net