ಉಡುಪಿ: ಇಂದಿನ ಯುವಜನತೆ ಡ್ರಗ್ಸ್ ವ್ಯಸನಗಳಿಗೆ ಬಲಿಯಾಗುತ್ತಿದ್ದು ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಸಾಮಾಜಿಕ ಅಪರಾಧಗಳಲ್ಲೂ ತೊಡಗುತ್ತಿದ್ದಾರೆ. ಹೀಗಾಗಿ ಸರ್ಕಾರ, ಆಡಳಿತ ವ್ಯವಸ್ಥೆ, ಸಾರ್ವಜನಿಕರು ಮತ್ತು ಎಲ್ಲ ವಿದ್ಯಾಸಂಸ್ಥೆಗಳು ಒಟ್ಟಾಗಿ ಯುವಜನತೆಯನ್ನು ಮಾದಕ ವ್ಯಸನಗಳಿಂದ ಮುಕ್ತಗೊಳಿಸುವಲ್ಲಿ ಶ್ರಮಿಸುವ ಅಗತ್ಯವಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿ ಅರುಣಕುಮಾರ್ ತಿಳಿಸಿದರು.