ಟೋಲ್ ಸಮಸ್ಯೆ ಪರಿಹರಿಸಲು ಸಚಿವರಿಗೆ ಮನವಿ

 ಹೆಜಮಾಡಿ ಟೋಲ್ ಪ್ಲಾಜಾದ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ವಿನಯಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ನಿಯೋಗ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿತು. ಪ್ರಮುಖರಾದ ವೈ.ಸುಕುಮಾರ್, ನವೀನ್‌ಚಂದ್ರ ಶೆಟ್ಟಿ, ಅಬ್ದುಲ್ ಅಜೀಜ್ ಮತ್ತಿತರರಿದ್ದರು.

Published on

ಡುಬಿದ್ರಿ: ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ನಿಯೋಗ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.

ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಟೋಲ್ ವಿನಾಯಿತಿ, ಜನಸ್ನೇಹಿ ವ್ಯವಸ್ಥೆ ಹಾಗೂ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ನಿಯೋಗ ಒತ್ತಾಯಿಸಿದೆ. ಸಚಿವರು ಮನವಿ ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ(ದಕ್ಷಿಣ) ಅಧ್ಯಕ್ಷ ವೈ.ಸುಕುಮಾರ್, ಕೆಪಿಸಿಸಿ ಕೋ-ಆರ್ಡಿನೇಟರ್‌ಗಳಾದ ನವೀನ್ ಚಂದ್ರ ಜೆ.ಶೆಟ್ಟಿ, ಅಬ್ದುಲ್ ಅಜೀಜ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಜ್, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ.ಸಾಲ್ಯಾನ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net