ಅಪ್ರಾಪ್ತ ಬಾಲಕಿಗೆ ಕಿರುಕುಳಕ್ಕೆ ಯತ್ನ

crime
crime
Published on

ಕಾಸರಗೋಡು: ಶಾಲೆಗೆ ನಡೆದು ಹೋಗುತ್ತಿದ್ದ 13ರ ಹರೆಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಳ್ಳತ್ತಡ್ಕ ಬಳಿಯ ಬನತ್ತಡಿ ನಿವಾಸಿ ರಮೇಶ (43)ಎಂಬಾತನನ್ನು ಬದಿಯಡ್ಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎರಡು ದಿವಸಗಳ ಹಿಂದೆ ಘಟನೆ ನಡೆದಿದ್ದು, ಶಾಲೆಗೆ ಒಂಟಿಯಾಗಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಆರೋಪಿ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ವಿವಿಧ ಸ್ಥಳಗಳ ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net