ಗ್ರಾಮಾಭಿವೃದ್ಧಿ ಯೋಜನೆಯಿಂದ ತುಳುನಾಡಿನ ಸಂಸ್ಕೃತಿ ಅರಿವು

 ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಕೆಸರ್‌ದ ಕಂಡೊಡೊಂಜಿ ದಿನ ಉದ್ಘಾಟಿಸಿದರು. ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಂ ಮೊದಲಾದವರಿದ್ದರು.
ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಕೆಸರ್‌ದ ಕಂಡೊಡೊಂಜಿ ದಿನ ಉದ್ಘಾಟಿಸಿದರು. ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಂ ಮೊದಲಾದವರಿದ್ದರು.
Published on

ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟೃ ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ, ಪ್ರಗತಿಬಂಧು ಒಕ್ಕೂಟ ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಜೈನ್‌ಪೇಟೆ ದೊಡ್ಡಮನೆ ಗದ್ದೆಯಲ್ಲಿ ಕೆಸರ್‌ದ ಕಂಡೊಡೊಂಜಿ ದಿನದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಮಾತನಾಡಿದರು. ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಂ ಶುಭ ಹಾರೈಸಿದರು. ಬೆಳ್ತಂಗಡಿ ಭಜನಾ ಪರಿಷತ್ ಅಧ್ಯಕ್ಷ ರವೀಂದ್ರ, ಗದ್ದೆಯಲ್ಲಿ ಸ್ಥಳಾವಕಾಶ ಒದಗಿಸಿದ ಪ್ರಗತಿಪರ ಕೃಷಿಕ ಸತೀಶ್ ಶೆಟ್ಟಿ ದೊಡ್ಡಮನೆ, ರತ್ನಮಾನಸ ಜೀವನ ಶಿಕ್ಷಣ ಕೇಂದ್ರದ ಮೇಲ್ವಿಚಾರಕ ಯತೀಶ್ ಬಳಂಜ, ಜಯಲಕ್ಷ್ಮೀ ದೊಡ್ಡಮನೆ, ವಿವಿಧ ವಲಯಗಳ ಒಕ್ಕೂಟದ ಅಧ್ಯಕ್ಷರು, ಸೇವಾನಿರತರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗಾಗಿ ಕೆಸರು ಗದ್ದೆ ಓಟ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆ, ಸಾಂಸ್ಕೃತಿಕ ಮತ್ತು ಮನರಂಜನಾ ಸ್ಪರ್ಧೆಗಳು ನಡೆದವು. ಕೆಸರು ಗದ್ದೆಯಲ್ಲೇ ವಿವಿಧ ವಲಯದ ಸದಸ್ಯರು ಆಕರ್ಷಕ ನೃತ್ಯ ಪ್ರದರ್ಶನ ನಡೆಸಿಕೊಟ್ಟರು.
ಗ್ರಾ.ಯೋ. ಜಿಲ್ಲಾ ನಿರ್ದೇಶಕ ದಿನೇಶ್ ಸ್ವಾಗತಿಸಿದರು. ಯೋಜನಾಧಿಕಾರಿ ಯಶೋಧರ ವಂದಿಸಿದರು. ಕೃಷಿ ವಿಭಾಗದ ಯೋಜನಾಧಿಕಾರಿ ರಾಮ್‌ಕುಮಾರ್ ಹಾಗೂ ವಿನ್ಯಾಸ್ ಕಾರ್ಯಕ್ರಮ ನಿರೂಪಿಸಿದರು.

ರಜಾದಿನಗಳಲ್ಲಿ ಹೆಚ್ಚಿನವರು ಮಾಲ್ ಹಾಗೂ ಪಟ್ಟಣ ಪ್ರದೇಶಗಳಿಗೆ ತೆರಳಲು ಆಸಕ್ತಿ ತೋರುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಇಂತಹ ಸಾಂಸ್ಕೃತಿಕ ಹಾಗೂ ಕೃಷಿ ಆಧಾರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ನೆಮ್ಮದಿಯೂ ದೊರೆಯುತ್ತದೆ. ಮಣ್ಣಿನೊಂದಿಗೆ ಬೆರೆಯುವ ಇಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯನ್ನು ಗಟ್ಟಿಗೊಳಿಸುತ್ತವೆ.

— ರೋಹಿಣಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net