ತಲೆಮಾರಿಗೆ ಆರೋಗ್ಯವಂತ ಜೀವನದ ಅರಿವು

 ವಿಶ್ವ ಜನಸಂಖ್ಯಾ ನಿಯಂತ್ರಣ ಮಾಹಿತಿ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಮಾತನಾಡಿದರು. ಪ್ರಮುಖರಾದ ಡಾ.ಮಂಜುನಾಥ ಎ.ಕೋಟ್ಯಾನ್, ಸುಶೀಲಾ ಕೆ., ಪ್ರೊ.ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
ವಿಶ್ವ ಜನಸಂಖ್ಯಾ ನಿಯಂತ್ರಣ ಮಾಹಿತಿ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಮಾತನಾಡಿದರು. ಪ್ರಮುಖರಾದ ಡಾ.ಮಂಜುನಾಥ ಎ.ಕೋಟ್ಯಾನ್, ಸುಶೀಲಾ ಕೆ., ಪ್ರೊ.ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
Published on

ಕಾರ್ಕಳ: ಜನಸಂಖ್ಯಾ ನಿಯಂತ್ರಣ ಏರುಪೇರಾದಾಗ ಪರಿಸರದಿಂದ ಹಿಡಿದು ಎಲ್ಲದಕ್ಕೂ ತೊಂದರೆಯಾಗುತ್ತದೆ. ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಸಮಾಜಕ್ಕೆ ಹೊರೆಯಾಗುತ್ತದೆ. ಮುಂದಿನ ತಲೆಮಾರಿಗೆ ಆರೋಗ್ಯವಂತ ಜೀವನದ ಮಾದರಿ ದಾಟಿಸುವ ಅಗತ್ಯ ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಸಂದೀಪ್ ಕುಡ್ವ ಹೇಳಿದರು.

ಶ್ರೀ ಭುವನೇಂದ್ರ ಕಾಲೇಜಿನ ಐ.ಕ್ಯೂ.ಎ.ಸಿ. ಸಹಯೋಗ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವತಿಯಿಂದ ಪ್ರಥಮ ಪದವಿಯ ಎಲ್ಲ ವಿಭಾಗಗಳ ವಿದ್ಯಾರ್ಥಿಗಳಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ನಿಯಂತ್ರಣ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ.ಮಂಜುನಾಥ ಎ.ಕೋಟ್ಯಾನ್, ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಕೆ., ಐಕ್ಯೂಎಸಿ ಸಂಯೋಜಕ ಪ್ರೊ.ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು. ಶಂಕರ್ ಕುಡ್ವ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net