ಶಿಕ್ಷಕ-ರಕ್ಷಕ ಮಹಾಸಭೆ ಹಾಗೂ ವಿದ್ಯಾರ್ಥಿಗಳ ಜನಪದ ಆಹಾರ ಮೇಳದಲ್ಲಿ ಸಿದ್ದಾಪುರ ಎಸ್.ಜೆ. ಪಿ.ಯು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಮಾತನಾಡಿದರು. ಪ್ರಮುಖರಾದ ಡಾ.ಜಯಪ್ರಕಾಶ್ ಶೆಟ್ಟಿ ಎಚ್., ಡಾ.ಎನ್.ಎಸ್.ಶೆಟ್ಟಿ, ಹರೀಶ್ ಹೆಗ್ಡೆ ಮೊದಲಾದವರಿದ್ದರು.
ಹೆಬ್ರಿ: ಸಂಸ್ಕೃತಿಯ ತಾಯಿಬೇರುಗಳ ಜತೆಗಿನ ಸಂಬಂಧವನ್ನು ಕಡಿದುಕೊಳ್ಳದಂತೆ ಸಾಂಸತಿಕ ಅಸ್ಮಿತೆಯ ಅರಿವಿನೊಂದಿಗೆ, ತಮ್ಮ ಬದುಕಿನ ಕಷ್ಟಗಳನ್ನು ಮಕ್ಕಳಿಂದ ಮುಚ್ಚಿಡದೆ ಅವರಲ್ಲಿ ಬದುಕಿನ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಹುಟ್ಟುಹಾಕಬೇಕು ಎಂದು ಸಿದ್ದಾಪುರ ಎಸ್.ಜೆ. ಪಿ.ಯು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಹೇಳಿದರು.
ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಶಿಕ್ಷಕ-ರಕ್ಷಕ ಮಹಾಸಭೆ ಹಾಗೂ ವಿದ್ಯಾರ್ಥಿಗಳ ಜನಪದ ಆಹಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ರುವೀರ ಶೆಟ್ಟಿಗಾರ್ ಮಾತನಾಡಿದರು. ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ರಾಜ್ಯಶಾಸ ಉಪನ್ಯಾಸಕ ದೇವದಾಸ್ ಡಿ.ಪ್ರಭು ಅವರನ್ನು ಗೌರವಿಸಲಾಯಿತು.
ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಡಾ.ಎನ್.ಎಸ್.ಶೆಟ್ಟಿ, ಹರೀಶ್ ಹೆಗ್ಡೆ, ಶಾಂತಾ, ವಸಂತ ಶೆಟ್ಟಿ ಚೆನ್ನಿಬೆಟ್ಟು, ಡಾ.ಸೌಮ್ಯಲತಾ, ಡಾ.ಲಿತಿನ್ ಬಿ.ಎಂ., ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.