ಪಡುಬಿದ್ರಿ: ಸಾಮಾಜ ಘಾತುಕ ವ್ಯಕ್ತಿಗಳು ಮುಗ್ಧ, ಅಮಾಯಕ ಜನರನ್ನು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡಿ, ಇಡೀ ಜೀವನದ ದಿಕ್ಕನ್ನೇ ತಪ್ಪಿಸುತ್ತಾರೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಉಡುಪಿ ಉಪವಿಭಾಗದ ಅಬಕಾರಿ ಉಪ ನಿರೀಕ್ಷಕ ಗುರುಮೂರ್ತಿ ಡಿ.ಪಾಲೇಕರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.