ಭ್ರೂಣದ ಲಿಂಗ ಪತ್ತೆ ಮಾಡುವ ಉದ್ದೇಶದಿಂದ ಅಲ್ಟ್ರಾಸೌಂಡ್ ಸೇರಿದಂತೆ ಯಾವುದೇ ಪ್ರಸವಪೂರ್ವ ಪರೀಕ್ಷೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಹಾಗೂ ಲಿಂಗ ಆಯ್ಕೆ ತಂತ್ರಗಳನ್ನು ಬಳಸುವುದು ಕಾನೂನುಬಾಹಿರವಾಗಿದ್ದು, ಪಿಸಿಪಿಎನ್ ಕಾಯ್ದೆಯ ನಿಯಮಗಳು, ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ನಡೆಸಿದಲ್ಲಿ ಎದುರಾಗುವ ಕಾನೂನು ಕ್ರಮ ಹಾಗೂ ಶಿಕ್ಷೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಪಂಚಾಯಿತಿ ಅಧಿಕಾರಿಗಳು, ಸ್ತ್ರೀ ಶಕ್ತಿ ಸಂಘ ಹಾಗೂ ಸಂಜೀವಿನಿ ಸಂಘದ ಸದಸ್ಯರು ಭಾಗವಹಿಸಿದ್ದರು.